ಬುಧವಾರ, ಜನವರಿ 20, 2021
24 °C

ಕೊವ್ಯಾಕ್ಸಿನ್ ತುರ್ತು ಬಳಕೆ ಅನುಮೋದನೆಗೆ ತಜ್ಞರ ಸಮಿತಿ ಶಿಫಾರಸು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಕೋವಿಡ್ 19 ಲಸಿಕೆ ಕೊವ್ಯಾಕ್ಸಿನ್‌ಗೆ ಕೆಲವು ಷರತ್ತುಗಳ ಜೊತೆ ಅನುಮೋದನೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಭಾರತೀಯ ಔಷಧ ಮಹಾನಿಯಂತ್ರಕದ ತಜ್ಞರ ಸಮಿತಿಯು ಶಿಫಾರಸು ಮಾಡಿದೆ. 

ಆಕ್ಸ್‌ ಫರ್ಡ್ಡ್ ಅಭಿವೃದ್ಧಿಪಡಿಸಿರುವ ಕೋವಿಡ್ 19 ಲಸಿಕೆಗೆ ಅನುಮೋದನೆಗೆ ನೀಡಿದ ನಿರ್ದೇಶನದಂತೆ ಈ ಲಸಿಕೆ ಅನುಮೋದನೆಗೂ ಶಿಫಾರಸು ಮಾಡಲಾಗಿದೆ.

ಇದನ್ನೂ ಓದಿ.. ಭಾರತದಲ್ಲಿ 'ಕೋವಿಶೀಲ್ಡ್‌' ಕೋವಿಡ್‌ ಲಸಿಕೆಯ ತುರ್ತು ಬಳಕೆಗೆ ಶಿಫಾರಸು

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಸಹಯೋಗದೊಂದಿಗೆ ಭಾರತ್ ಬಯೋಟೆಕ್ ಈ ಲಸಿಕೆಯನ್ನು ದೇಶೀಯವಾಗಿ ಅಭಿವೃದ್ಧಿಪಡಿಸಿದೆ.

ಹೈದರಾಬಾದ್ ಮೂಲದ ಔಷಧಿ ಸಂಸ್ಥೆ ಭಾರತ್ ಬಯೋಟೆಕ್ ತಮ್ಮ ಲಸಿಕೆ ಅನುಮೋದನೆಗೆ ಸಂಬಂಧಿಸಿದ ಹೆಚ್ಚುವರಿ ಮಾಹಿತಿ, ವಿಶ್ಲೇಷಣೆಯನ್ನು ಸಲ್ಲಿಸಿದ ಬಳಿಕ ಶುಕ್ರವಾರ ಮತ್ತೆ ಪರಿಶೀಲನಾ ಸಭೆ ನಡೆಸಿದ ಕೇಂದ್ರೀಯ ಔಷಧಿ ಗುಣಮಟ್ಟ ನಿಯಂತ್ರಣ ಸಂಸ್ಥೆಯ (ಸಿಡಿಎಸ್‌ಸಿಒ) ಕೋವಿಡ್ -19 ತಜ್ಞರ ಸಮಿತಿ (ಎಸ್‌ಇಸಿ) ಶನಿವಾರ ತುರ್ತು ಬಳಕೆಗೆ ಲಸಿಕೆಗೆ ಅನುಮೋದನೆ ನೀಡುವಂತೆ ಶಿಫಾರಸು ಮಾಡಿದೆ.

ಡಿಸೆಂಬರ್ 7 ರಂದು ಭಾರತ್ ಬಯೋಟೆಕ್ ತನ್ನ ಕೋವಾಕ್ಸಿನ್‌ ಲಸಿಕೆಯ ತುರ್ತು ಬಳಕೆಗೆ ಅನುಮತಿ ಕೋರಿ ಭಾರತೀಯ ಔಷಧ ಮಹಾನಿಯಂತ್ರಕ(ಡಿಸಿಜಿಐ)ಕ್ಕೆ ಅರ್ಜಿ ಸಲ್ಲಿಸಿತ್ತು.

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸುತ್ತಿರುವ ಆಕ್ಸ್‌ಫರ್ಡ್-ಅಸ್ಟ್ರಾಜೆನೆಕಾ ಲಸಿಕೆ ಕೋವಿಶೀಲ್ಡ್‌ನ ತುರ್ತು ಬಳಕೆಗೆ ಅನುಮತಿ ನೀಡುವಂತೆ ಶುಕ್ರವಾರ ತಜ್ಞರ ಸಮಿತಿ  ಶಿಫಾರಸು ಮಾಡಿತ್ತು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು