ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಗೆ ಮುನ್ನಡೆ: ಮಣಿಪುರ ಸಿಎಂ ನಿವಾಸದಲ್ಲಿ ಗಮನ ಸೆಳೆದ ಸಾಂಪ್ರದಾಯಿಕ ನೃತ್ಯ 

Last Updated 10 ಮಾರ್ಚ್ 2022, 9:48 IST
ಅಕ್ಷರ ಗಾತ್ರ

ಇಂಫಾಲ್: ಮಣಿಪುರ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಮರಳಿದೆ. ಮಧ್ಯಾಹ್ನ(2 ಗಂಟೆ)ದ ಟ್ರೆಂಡ್ ಪ್ರಕಾರ, 60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ ಬಿಜೆಪಿ 30ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿತ್ತು. ಕಾಂಗ್ರೆಸ್ ಕೇವಲ 9 ಕ್ಷೇತ್ರಗಳಷ್ಟೇ ಮುನ್ನಡೆ ಪಡೆದಿತ್ತು. ಹೀಗಾಗಿ, ಬಹುತೇಕ ಬಿಜೆಪಿ ಅದಿಕಾರಕ್ಕೆ ಮರಳುವುದು ಖಚಿತವಾಗಿದೆ.

ಎನ್‌ಪಿಪಿ 9, ಜೆಡಿಯು 4 ಮತ್ತು ಇತರರು 9 ಕ್ಷೇತ್ರಗಳಲ್ಲಿ ಗೆಲುವಿನತ್ತ ಮುಖ ಮಾಡಿದ್ಧಾರೆ.

ಈ ನಡುವೆ ಮುಖ್ಯಮಂತ್ರಿ ಬಿರೇನ್ ಸಿಂಗ್ 18,271 ಮತಗಳ ಅಂತರದಿಂದ ಹೀಗ್ಯಾಂಗ್ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು, ಇಂಫಾಲ್‌ನ ಅವರ ನಿವಾಸದಲ್ಲಿ ಸಂಭ್ರಮ ಮನೆ ಮಾಡಿತ್ತು. ಪಕ್ಷದ ಮಹಿಳಾ ಕಾರ್ಯಕರ್ತರು ಸಾಂಪ್ರದಾಯಿಕ ಹಾಡಿಗೆ ಹೆಜ್ಜೆ ಹಾಕುವ ಮೂಲಕ ತಮ್ಮ ಸಂತಸವನ್ನು ತೋರ್ಪಡಿಸಿದರು.

‘ಪೂರ್ಣ ಫಲಿತಾಂಶ ಬಂದ ಬಳಿಕ ನಾವು ಸರ್ಕಾರ ರಚನೆಗೆ ಹಕ್ಕು ಮಂಡಿಸುತ್ತೇವೆ. ನಮ್ಮ ರಾಷ್ಟ್ರೀಯ ನಾಯಕರು ಮುಖ್ಯಮಂತ್ರಿ ಯಾರೆಂಬುದನ್ನು ನಿರ್ಧರಿಸುತ್ತಾರೆ. ಪ್ರಧಾನಿ ಮೋದಿಯವರ ಅಭಿವೃದ್ಧಿ ಒಳಗೊಳ್ಳುವಿಕೆಯ ಮಂತ್ರ’ವನ್ನು ಪಾಲಿಸುತ್ತೇವೆ’ಎಂದು ಬಿರೇನ್ ಸಿಂಗ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT