ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಪರಿಣಾಮ ಜನಗಣತಿ ಚಟುವಟಿಕೆ ಮುಂದೂಡಿಕೆ: ಕೇಂದ್ರ ಸರ್ಕಾರ

Last Updated 27 ಜುಲೈ 2021, 13:59 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌ ಪರಿಸ್ಥಿತಿಯ ಹಿನ್ನೆಲೆಯಲ್ಲಿ ದೇಶದಾದ್ಯಂತ ಜನಗಣತಿ 2021ಗೆ ಸಂಬಂಧಿಸಿದ ಚಟುವಟಿಕೆಗಳನ್ನು ಮುಂದೂಡಲಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ.

ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಈ ಸಂಬಂಧ ಲಿಖಿತ ಹೇಳಿಕೆ ನೀಡಿದರು. ಜನಗಣತಿ ಕಾಯ್ದೆ 1948ರ ಅನ್ವಯ ಎರಡು ಹಂತದಲ್ಲಿ ಗಣತಿ ಚಟುವಟಿಕೆಗಳನ್ನು ನಡೆಸಬೇಕಾಗಿತ್ತು ಎಂದೂ ತಿಳಿಸಿದರು.

ಏಪ್ರಿಲ್‌–ಸೆಪ್ಟೆಂಬರ್‌ 2020ರಲ್ಲಿ ಮನೆಗಣತಿ, ಫೆಬ್ರುವರಿ 9–28, 2021ರ ಅವಧಿಯಲ್ಲಿ ಜನಗಣತಿ ನಡೆಯಬೇಕಿತ್ತು. ಈ ಚಟುವಟಿಕೆಯನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.

ಭೌಗೋಳಿಕ ಹಾಗೂ ಸಾಮಾಜಿಕ–ಆರ್ಥಿಕ ಮಾನದಂಡಗಳು ಅಂದರೆ ಪರಿಶಿಷ್ಟರು, ಧರ್ಮ, ಭಾಷೆ, ವೈವಾಹಿಕ ಸ್ಥಿತಿ, ಅಂಗವಿಕಲತೆ, ಉದ್ಯೋಗ, ವಲಸೆ ಅಂಶಗಳನ್ನು ಆಧರಿಸಿ ಗಣತಿ ಕಾರ್ಯವನ್ನು ನಡೆಸಲಾಗುತ್ತದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT