ಗುರುವಾರ , ಆಗಸ್ಟ್ 11, 2022
27 °C

ಕೇಂದ್ರ ಸರ್ಕಾರ ಬಡವರ ಮಾನವ ಹಕ್ಕುಗಳನ್ನು ಕಸಿದುಕೊಂಡಿದೆ: ರಾಹುಲ್ ಗಾಂಧಿ ಆರೋಪ

ಎಎನ್‌ಐ‌ Updated:

ಅಕ್ಷರ ಗಾತ್ರ : | |

ನವದೆಹಲಿ: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯು 15ನೇ ದಿನಕ್ಕೆ ಕಾಲಿಟ್ಟಿದೆ. ಇದೇ 14ರಂದು ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ.

ಈ ಮಧ್ಯೆ ಡಿಸೆಂಬರ್ 10 ವಿಶ್ವ ಮಾನವ ಹಕ್ಕುಗಳ ದಿನಾಚರಣೆಯಂದು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನರೇಂದ್ರ ಮೋದಿ ಸರ್ಕಾರ ಬಡವರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಆರೋಪ ಮಾಡಿದರು.

'ಕೇಂದ್ರ ಸರ್ಕಾರ ಬಡವರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಇದು ಮಾನವೀಯತೆಯ ವಿರುದ್ಧದ ಅಪರಾಧ' ಎಂದು ಟ್ವಿಟರ್ ಖಾತೆಯಲ್ಲಿ ಬರೆದುಕೊಂಡರು.

ಇದನ್ನೂ ಓದಿ: 

'ದೇಶದ ಉತ್ತಮ ಭವಿಷ್ಯಕ್ಕಾಗಿ, ನಾವು ಎಲ್ಲ ವರ್ಗದ ಜನರ ಹಕ್ಕುಗಳನ್ನು ಗೌರವಿಸಬೇಕು' ಎಂದು ಹೇಳಿದರು.

 

 

 

ಈ ಮೊದಲು ಹೇಳಿಕೆ ಕೊಟ್ಟಿರುವ ರಾಹುಲ್ ಗಾಂಧಿ, 'ಸರ್ಕಾರ ಪ್ರಜಾಪ್ರಭುತ್ವದಿಂದ ಮುಕ್ತಿ ಪಡೆಯಲು ಬಯಸುತ್ತಿದೆ' ಎಂದು ವಾಗ್ದಾಳಿ ನಡೆಸಿದ್ದರು.

 

ರೈತರ ಪ್ರತಿಭಟನೆಯ ಒತ್ತಡಕ್ಕೆ ಮಣಿದ ಸರ್ಕಾರ ಕೃಷಿ ಕ್ಷೇತ್ರದ ಸುಧಾರಣೆಗೆ ಇತ್ತೀಚೆಗೆ ಮೂರು ಕಾಯ್ದೆಗಳಲ್ಲಿ ಗಮನಾರ್ಹವಾದ ತಿದ್ದುಪಡಿ ತರುವ ಪ್ರಸ್ತಾಪ ಮುಂದಿಟ್ಟಿತ್ತು. ಆದರೆ ಮೂರು ಕಾಯ್ದೆಗಳನ್ನು ರದ್ದುಪಡಿಸಬೇಕು ಎಂಬ ರೈತರ ಆಗ್ರಹವನ್ನು ತಿರಸ್ಕರಿಸಿದೆ. ಸರ್ಕಾರದ ಪ್ರಸ್ತಾವವನ್ನು ಪ್ರತಿಭಟನಾನಿರತ ರೈತರು ತಿರಸ್ಕರಿಸಿದ್ದರು.

ಇದನ್ನೂ ಓದಿ: 

ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ಮನವಿ
ಏತನ್ಮಧ್ಯೆ ಪ್ರತಿಭಟನೆಯನ್ನು ಅಂತ್ಯಗೊಳಿಸುವಂತೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಗುರುವಾರದಂದು ರೈತರಿಗೆ ಮನವಿ ಮಾಡಲಿದ್ದಾರೆ. ಈ ಬಿಕ್ಕಟ್ಟನ್ನು ಕೊನೆಗೊಳಿಸಲು ಸರ್ಕಾರದೊಂದಿಗೆ ಕೆಲಸ ಮಾಡುವಂತೆ ತೋಮರ್ ಕರೆ ನೀಡಲಿದ್ದು, ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಲಿದ್ದಾರೆ ಎಂಬುದು ತಿಳಿದು ಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು