ಬುಧವಾರ, ಜೂನ್ 29, 2022
23 °C

ನ್ಯೂ ಟೌನ್ ಶೂಟೌಟ್ ಬಗ್ಗೆ ಕೇಂದ್ರದ ಏಜೆನ್ಸಿಯಿಂದ ತನಿಖೆಯಾಗಲಿ: ದಿಲೀಪ್ ಘೋಷ್

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಪಶ್ಚಿಮ ಬಂಗಾಳದ ನ್ಯೂ ಟೌನ್‌ನಲ್ಲಿ ನಡೆದ ಶೂಟೌಟ್ ಬಗ್ಗೆ ಕೇಂದ್ರ ಸರ್ಕಾರದ ಏಜೆನ್ಸಿಯಿಂದಲೇ ತನಿಖೆಯಾಗಬೇಕು ಎಂದು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಆಗ್ರಹಿಸಿದ್ದಾರೆ.

ರಾಜ್ಯವು ಭಯೋತ್ಪಾದಕರ ಮತ್ತು ಅಪರಾಧಿಗಳ ತಾಣವಾಗಿದೆ. ಗ್ಯಾಂಗ್‌ಸ್ಟರ್‌ಗಳಿಗೆ ನ್ಯೂ ಟೌನ್‌ನ ಅಪಾರ್ಟ್‌ಮೆಂಟ್‌ ಬ್ಲಾಕ್‌ನಲ್ಲಿ ಫ್ಲ್ಯಾಟ್ ಬಾಡಿಗೆಗೆ ದೊರೆತಿದ್ದು ಹೇಗೆ ಎಂಬ ಬಗ್ಗೆ ತನಿಖೆಯಾಗಬೇಕು ಎಂದು ಅವರು ಹೇಳಿದ್ದಾರೆ.

ಪಂಜಾಬ್‌ನ ಇಬ್ಬರು ಗ್ಯಾಂಗ್‌ಸ್ಟರ್‌ಗಳನ್ನು ಪಶ್ಚಿಮ ಬಂಗಾಳ ಪೊಲೀಸ್‌ನ ವಿಶೇಷ ಕಾರ್ಯಪಡೆಯು (ಎಸ್‌ಟಿಎಫ್) ಬುಧವಾರ ಎನ್‌ಕೌಂಟರ್ ನಡೆಸಿ ಹತ್ಯೆ ಮಾಡಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗ್ಯಾಂಗ್‌ಸ್ಟರ್‌ಗಳು ಮೇ 22ರಿಂದ ಫ್ಲ್ಯಾಟ್‌ನಲ್ಲಿದ್ದರು. ಅಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಪತ್ತೆಯಾಗಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು