ಶನಿವಾರ, ಏಪ್ರಿಲ್ 17, 2021
22 °C

ಕೋವಿಡ್‌: 45 ವರ್ಷ ಮೇಲ್ಪಟ್ಟ ಸಿಬ್ಬಂದಿ ಲಸಿಕೆ ಹಾಕಿಸಿಕೊಳ್ಳಲು ಕೇಂದ್ರ ಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌–19 ನಿಯಂತ್ರಿಸುವ ನಿಟ್ಟಿನಲ್ಲಿ 45 ವರ್ಷ ಮತ್ತು ಅದಕ್ಕಿಂತಲೂ ಮೇಲ್ಪಟ್ಟ ವಯಸ್ಸಿನ ಎಲ್ಲ ಸಿಬ್ಬಂದಿ ಲಸಿಕೆ ಹಾಕಿಸಿಕೊಳ್ಳುವಂತೆ ಸರ್ಕಾರ ಮಂಗಳವಾರ ಸೂಚಿಸಿದೆ.

ಲಸಿಕೆ ಹಾಕಿಸಿಕೊಂಡ ನಂತರವೂ ಕೋವಿಡ್‌ ನಿಯಂತ್ರಣ ಕ್ರಮಗಳನ್ನು ಅನುಸರಿಸಬೇಕು. ಆಗಾಗ್ಗೆ ಕೈಗಳನ್ನು ತೊಳೆಯುವುದು ಮತ್ತು ಶುಚಿಗೊಳಿಸುವುದು, ಮಾಸ್ಕ್‌ ಧರಿಸುವುದು ಹಾಗೂ ಪರಸ್ಪರ ಅಂತರ ಕಾಯ್ದುಕೊಳ್ಳುವುದನ್ನು ಮುಂದುವರಿಸಬೇಕು ಎಂದು ಸಿಬ್ಬಂದಿ ಸಚಿವಾಲಯ ಆದೇಶದಲ್ಲಿ ಪ್ರಕಟಿಸಿದೆ.

ಪ್ರಸ್ತುತ 45 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲ ವ್ಯಕ್ತಿಗಳೂ ಲಸಿಕೆ ಹಾಕಿಸಿಕೊಳ್ಳಬಹುದಾಗಿದೆ. 'ಕೇಂದ್ರ ಸರ್ಕಾರದ ಸಿಬ್ಬಂದಿಯೂ ತಾವಾಗಿಯೇ ಲಸಿಕೆ ಹಾಕಿಸಿಕೊಳ್ಳಲು ಮುಂದಾಗಬೇಕು...' ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಳೆದ ಕೆಲವು ವಾರಗಳಿಂದ ದೇಶದಲ್ಲಿ ಕೋವಿಡ್‌–19 ಪ್ರಕರಣಗಳ ಸಂಖ್ಯೆ ಅಪಾಯಕಾರಿ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಮಂಗಳವಾರ ಬೆಳಗ್ಗಿನ ವರೆಗೂ 24 ಗಂಟೆಗಳ ಅಂತರದಲ್ಲಿ ದೇಶದಲ್ಲಿ ಕೋವಿಡ್‌ ದೃಢಪಟ್ಟ 96,982 ಪ್ರಕರಣಗಳು ದಾಖಲಾಗಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು