ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಮ್ಲಜನಕ ವ್ಯರ್ಥಗೊಳಿಸಬೇಡಿ: ಕೇಂದ್ರದ ಸೂಚನೆ

Last Updated 30 ಏಪ್ರಿಲ್ 2021, 15:05 IST
ಅಕ್ಷರ ಗಾತ್ರ

ನವದೆಹಲಿ: ಆಮ್ಲಜನಕ ಮತ್ತುಸಾರ್ವಜನಿಕ ಆರೋಗ್ಯ ಪರಿಕರಗಳನ್ನು ವ್ಯರ್ಥ ಮಾಡದೆ ಅಗತ್ಯಕ್ಕೆ ಅನುಗುಣವಾಗಿ ಬಳಸುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

‘ದೇಶದಲ್ಲಿ ಆಮ್ಲಜನಕದ ಕೊರತೆ ಇಲ್ಲ. ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹಿಸಿಡಲಾಗಿದೆ. ಸಾರ್ವಜನಿಕರು ಆಮ್ಲಜನಕದ ಲಭ್ಯತೆಯ ಬಗ್ಗೆ ಭಯಪಡುವ ಅಗತ್ಯವಿಲ್ಲ’ ಎಂದು ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಪಿಯೂಷ್‌ ಗೋಯಲ್‌ ಹೇಳಿದ್ದಾರೆ.

‘ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆಯನ್ನು ಶೇಕಡ 125 ರಷ್ಟು ಹೆಚ್ಚಿಸಲಾಗಿದೆ. ಪ್ರತಿದಿನ 7,500 ಮೆಟ್ರಿಕ್ ಟನ್‌ನಷ್ಟು ದ್ರವ ಆಮ್ಲಜನಕ ಉತ್ಪಾದಿಸುವ ಸಾಮರ್ಥ್ಯ ಇದೆ. ಸರ್ಕಾರವು ವೈದ್ಯಕೀಯ ಆಮ್ಲಜನಕವನ್ನು ಆಮದು ಮಾಡಿಕೊಳ್ಳುತ್ತಿದೆ’ ಎಂದು ಮಾಹಿತಿ ನೀಡಿದರು.

‘ದೇಶವು ಸಾಕಷ್ಟು ಪ್ರಮಾಣದ ವೈದ್ಯಕೀಯ ಆಮ್ಲಜನಕವನ್ನು ಹೊಂದಿದೆ. ಆಮ್ಲಜನಕ ಉತ್ಪಾದಿಸುವ ಭಾರತದ ಪೂರ್ವ ರಾಜ್ಯಗಳಿಂದ ಬೇಡಿಕೆ ಇರುವ ಉತ್ತರ ಮತ್ತು ಮಧ್ಯ ಭಾರತದ ರಾಜ್ಯಗಳಿಗೆಆಮ್ಲಜನಕ ಸಾಗಿಸುವ ಸಮಸ್ಯೆಯನ್ನು ಬಗೆಹರಿಸಲಾಗುತ್ತಿದೆ’ ಎಂದು ಗೋಯಲ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT