ಮಂಗಳವಾರ, ಮಾರ್ಚ್ 21, 2023
28 °C

ಕೇಂದ್ರ ಸರ್ಕಾರದ ನೌಕರರ ತುಟ್ಟಿಭತ್ಯೆ ಹೆಚ್ಚಳ: ಜುಲೈ 1ರಿಂದಲೇ ಅನ್ವಯ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಸರ್ಕಾರದ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆ (ಡಿ.ಎ) ಹೆಚ್ಚಿಸಿರುವುದಾಗಿ ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದೆ.

ತುಟ್ಟಿಭತ್ಯೆ ಶೇ 17ರಿಂದ ಶೇ.28ಕ್ಕೆ ಹೆಚ್ಚಿಸಿರುವುದಾಗಿ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಪ್ರಕಟಿಸಿದರು.

2021ರ ಜುಲೈ 1ರಿಂದಲೇ ತುಟ್ಟಿಭತ್ಯೆ ಹೆಚ್ಚಳ ಅನ್ವಯವಾಗಲಿದೆ. ಕೇಂದ್ರ ಸಚಿವ ಸಂಪುಟದಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. 

ಕೇಂದ್ರ ಸರ್ಕಾರದ ನೌಕರರಿಗೆ ತುಟ್ಟಿಭತ್ಯೆ ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಪರಿಹಾರವನ್ನು 2021 ಜುಲೈ 1ರಿಂದ ಅನ್ವಯವಾಗುವಂತೆ ಶೇಕಡಾ 28ಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು. 

ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಸುಮಾರು  ₹34,400 ಕೋಟಿ ವೆಚ್ಚವಾಗಲಿದೆ. ಇದರಿಂದ ಕೇಂದ್ರ ಸರ್ಕಾರದ 48,34,000 ನೌಕರರು ಹಾಗೂ 65,26,000 ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ ಎಂದು ವಾರ್ತಾ ಮತ್ತು ಪ್ರಚಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು