ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಬಿಎಸ್‌ಪಿ ಒತ್ತಾಯ  

ಸಿಎಎ ಹೋರಾಟದಲ್ಲಿ ಭಾಗಿಯಾದವರ ಬಂಧನ ಸರಿಯಲ್ಲ
Last Updated 13 ಡಿಸೆಂಬರ್ 2021, 12:21 IST
ಅಕ್ಷರ ಗಾತ್ರ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿಸಿ ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದವರ ಮೇಲೆ ಕ್ರಮಕೈಗೊಂಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಬೇಕು ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಸದಸ್ಯಡ್ಯಾನಿಶ್ ಅಲಿ ಆಗ್ರಹಿಸಿದರು.

ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು ಸಿಎಎ ಅನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಸಿಎಎ ವಿರುದ್ದ ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದವರನ್ನು ಕಾನೂನುಬಾಹಿರ ಚಟುವಟಿಕೆಗಳ(ತಡೆ) ಕಾಯ್ದೆ ಅಡಿ ಬಂಧಿಸಿದ್ದು, ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಮತ್ತು ಪ್ರತಿಭಟನಕಾರರನ್ನು ಬಂಧಿಸಿದಕ್ಕಾಗಿ ಪ್ರಧಾನಿ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT