ಮಂಗಳವಾರ, ಮಾರ್ಚ್ 2, 2021
21 °C

ಎನ್‌ಐಎ ನೋಟಿಸ್‌ ಮೂಲಕ ಕೇಂದ್ರ ಸರ್ಕಾರದಿಂದ ಕಿರುಕುಳ: ದೆಹಲಿಯಲ್ಲಿ ರೈತರ ಆರೋಪ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿಯ ಗಡಿಗಳಲ್ಲಿ ಪ್ರತಿಭಟಿಸುತ್ತಿರುವ ರೈತರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನೋಟಿಸ್‌ಗಳನ್ನು ನೀಡುತ್ತಿದೆ. ಆ ಮೂಲಕ ಕೇಂದ್ರ ಸರ್ಕಾರವು ರೈತರ ಮೇಲೆ 'ಕಿರುಕುಳ' ನಡೆಸುತ್ತಿದೆ ಎಂದು ರೈತ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.

ನೋಟಿಸ್‌ ಪಡೆದಿರುವ ಯಾವುದೇ ರೈತರು ಎನ್‌ಐಎ ಮುಂದೆ ಹಾಜರಾಗಬಾರದು ಎಂದು ನಿರ್ಧರಿಸಲಾಗಿದೆ. ಇದು ಪ್ರತಿಭಟನೆಯ ಸಂಕೇತವಾಗಲಿದೆ ಎಂದು ರೈತ ಸಂಘಗಳು ತಿಳಿಸಿವೆ.

'ಪ್ರತಿಭಟನಾಕಾರರಿಗೆ ನೀಡಿರುವ ನೋಟಿಸ್‌ ನಾಚಿಕೆಗೇಡಿನ ಸಂಗತಿಯಾಗಿದೆ. ಇದು ಸರ್ಕಾರದ ಅಸೂಕ್ಷ್ಮತೆಯನ್ನು ತೋರಿಸುತ್ತದೆ. ಇಂತಹ ನೋಟಿಸ್‌ಗಳ ವಿರುದ್ಧ ಮುಂದಿನ ದಿನಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಲಾಗುವುದು' ಎಂದು ಸಂಯುಕ್ತ್‌ ಕಿಸಾನ್‌ ಮೋರ್ಚಾ ಆಕ್ರೋಶ ವ್ಯಕ್ತಪಡಿಸಿದೆ.

ನೂತನ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನಾನಿರತ ರೈತರು ಮತ್ತು ಕೇಂದ್ರ ಕೃಷಿ ಸಚಿವಾಲಯದ ನಡುವೆ ಶುಕ್ರವಾರ ನಡೆದ 9ನೇ ಸುತ್ತಿನ ಮಾತುಕತೆಯು ವಿಫಲವಾಗಿದೆ. ರೈತರು ಮತ್ತು ಸರ್ಕಾರವು ತಮ್ಮ ಪಟ್ಟುಗಳನ್ನು ಸಡಿಲಿಸದ ಕಾರಣ ಯಾವುದೇ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಆದರೆ ಜನವರಿ 19ಕ್ಕೆ 10ನೇ ಸುತ್ತಿನ ಮಾತುಕತೆ ನಿಗದಿಯಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು