ಯಸ್ ಚಂಡಮಾರುತ: ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಕೇಂದ್ರದ ತಂಡ

ನವದೆಹಲಿ: ‘ಯಸ್’ ಚಂಡಮಾರುತದಿಂದ ಉಂಟಾದ ಹಾನಿ ಬಗ್ಗೆ ಪರಿಶೀಲಿಸಲು ಗೃಹ ಸಚಿವಾಲಯದ (ಎಂಎಚ್ಎ) ಜಂಟಿ ಕಾರ್ಯದರ್ಶಿ ನೇತೃತ್ವದ ತಂಡವು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.
‘ಮೇ 26ರಂದು ‘ಯಸ್’ ಚಂಡಮಾರುತವು ಒಡಿಶಾಗೆ ಅಪ್ಪಳಿಸಿತು. ಈ ಸಂದರ್ಭದಲ್ಲಿ ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರಿ ಹಾನಿ ಉಂಟಾಗಿದೆ. ಇದನ್ನು ಪರಿಶೀಲಿಸಲು ಕೇಂದ್ರದ ತಂಡವು ಪಶ್ಚಿಮ ಬಂಗಾಳದಲ್ಲಿ ಮೂರು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದೆ’ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದರು.
ಇದನ್ನೂ ಓದಿ... 9.27 ಲಕ್ಷ ಮಕ್ಕಳಲ್ಲಿ ತೀವ್ರ ಸ್ವರೂಪದ ಅಪೌಷ್ಟಿಕತೆ: ಮಕ್ಕಳ ಅಭಿವೃದ್ಧಿ ಸಚಿವಾಲಯ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.