ಗುರುವಾರ , ಮೇ 26, 2022
26 °C

ಕೋವಿಡ್ ಹೆಚ್ಚಳ: ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ಕೇಂದ್ರ ತಂಡ ನಿಯೋಜನೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ಬಹು-ಶಿಸ್ತಿನ ತಂಡವನ್ನು ನಿಯೋಜಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಕರ್ನಾಟಕ, ಕೇರಳ, ಮಹಾರಾಷ್ಟ್ರ, ತಮಿಳುನಾಡು, ಪಶ್ಚಿಮ ಬಂಗಾಳ, ಮಿಜೋರಾಂ, ಬಿಹಾರ, ಉತ್ತರ ಪ್ರದೇಶ, ಜಾರ್ಖಂಡ್ ಮತ್ತು ಪಂಜಾಬ್‌ ರಾಜ್ಯಗಳಲ್ಲಿ ಕೇಂದ್ರ ತಂಡಗಳನ್ನು ನಿಯೋಜಿಸಿದೆ.

ಇದನ್ನೂ ಓದಿ: 

 

 

 

ಈ ತಂಡಗಳು ಮೂರರಿಂದ ಐದು ದಿನಗಳ ವರೆಗೆ ಆಯಾ ರಾಜ್ಯಗಳ ಆರೋಗ್ಯ ಅಧಿಕಾರಿಗಳೊಂದಿಗೆ ಕಾರ್ಯ ನಿರ್ವಹಿಸಲಿವೆ. ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ, ಕೋವಿಡ್ ಲಸಿಕೆ ವೇಗ ಕುಂಠಿತ ಸೇರಿದಂತೆ ಪ್ರಮುಖ ವಿಚಾರಗಳ ಮೇಲೆ ಗಮನ ಕೇಂದ್ರಿಕರಿಸಲಿದೆ.

 

ಸೋಂಕು ಹರಡುವಿಕೆಯ ಪತ್ತೆ, ಕಣ್ಗಾವಲು, ಕೋವಿಡ್-19 ಪರೀಕ್ಷೆ ಹಾಗೂ ವೈರಾಣು ಸಂರಚನೆ ವಿಶ್ಲೇಷಣೆಗಾಗಿ (ಜಿನೋಮ್ ಸೀಕ್ವೆನ್ಸಿಂಗ್) ಐಎನ್‌ಎಸ್‌ಎಸಿಒಜಿ ಜಾಲಕ್ಕೆ ಕ್ಲಸ್ಟರ್‌ಗಳಿಂದ ಸಾಕಷ್ಟು ಮಾದರಿಗಳನ್ನು ಕಳುಹಿಸಿಕೊಡುವುದರತ್ತ ಗಮನ ಹರಿಸಲಿದೆ.

ಕೋವಿಡ್ ಮಾರ್ಗಸೂಚಿ ಪಾಲನೆ, ಅದರ ಜಾರಿ, ಆಸ್ಪತ್ರೆಯಲ್ಲಿ ಬೆಡ್‌ಗಳ ಲಭ್ಯತೆ, ಆ್ಯಂಬುಲೆನ್ಸ್, ವೆಂಟಿಲೇಟರ್, ವೈದ್ಯಕೀಯ ಆಮ್ಲಜನಕ ಪೂರೈಕೆ, ವ್ಯಾಕ್ಸಿನೇಷನ್ ಪ್ರಗತಿ ಮೇಲೂ ನಿಗಾ ವಹಿಸಲಿದೆ.

 

 

 

ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ 7,189 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಓಮೈಕ್ರಾನ್ ಪ್ರಕರಣ ಹೆಚ್ಚುತ್ತಿರುವುದು ಕಳವಳಕ್ಕೆ ಕಾರಣವಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು