ಮಂಗಳವಾರ, ಜೂನ್ 28, 2022
26 °C

ಪಿಎಂಎವೈ ಅಡಿ 3.61 ಲಕ್ಷ ಮನೆಗಳ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ತೀವ್ರ ನಷ್ಟಕ್ಕೀಡಾಗಿರುವ ರಿಯಲ್ ಎಸ್ಟೇಟ್ ಕ್ಷೇತ್ರ ಪುನರುಜ್ಜೀವನಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್ ಯೋಜನೆ - ನಗರ (ಪಿಎಂಎವೈ-ಯು) ಅಡಿಯಲ್ಲಿ 3.61 ಲಕ್ಷ ಹೊಸ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಿದೆ.

ಮಂಗಳವಾರ ನಡೆದ ಕೇಂದ್ರ ಮಂಜೂರಾತಿ ಮತ್ತು ಉಸ್ತುವಾರಿ ಸಮಿತಿ (ಸಿಎಸ್‌ಎಂಸಿ) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕೋವಿಡ್ -19 ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಮಧ್ಯೆ ನಡೆದ ಮೊದಲ ಸಭೆ ಇದು. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಕ್ಕೆ ರಾಜ್ಯಗಳು ಸಲ್ಲಿಸಿದ 708 ಪ್ರಸ್ತಾವನೆಗಳ ಆಧಾರದ ಮೇಲೆ ಇದಕ್ಕೆ ಅನುಮೋದನೆ ನೀಡಲಾಗಿದೆ. ಸಭೆಯಲ್ಲಿ 13 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಈ ಮನೆಗಳನ್ನು ಕೈಗೆಟುಕುವ ದರದಲ್ಲಿ ಒದಗಿಸಲು ಫಲಾನುಭವಿಗಳ ನೇತೃತ್ವದಲ್ಲೇ ನಿರ್ಮಾಣ ಸಂಸ್ಥೆಗಳು ಮತ್ತು ಸರ್ಕಾರದ ಪಾಲುದಾರಿಕೆಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಹೇಳಿಕೆ ತಿಳಿಸಿದೆ.

‘ಈವರೆಗೆ ಪಿಎಂಎವೈ (ಯು) ಅಡಿಯಲ್ಲಿ ಮಂಜೂರಾದ ಒಟ್ಟು ಮನೆಗಳ ಸಂಖ್ಯೆ 112.4 ಲಕ್ಷ. ಇದುವರೆಗೆ 82.5 ಲಕ್ಷ ಮನೆಗಳನ್ನು ನಿರ್ಮಿಸಲಾಗಿದ್ದು, ಇದರಲ್ಲಿ 48.31 ಲಕ್ಷ ಮನೆಗಳು ಪೂರ್ಣಗೊಂಡಿದ್ದು, ಫಲಾನುಭವಿಗಳಿಗೆ ವಿತರಿಸಲಾಗಿದೆ. ಈ ಯೋಜನೆಯಡಿ ಒಟ್ಟು ₹7.35 ಲಕ್ಷ ಕೋಟಿ ಹೂಡಿಕೆ ಮಾಡಲಾಗಿದ್ದು, ಇದರಲ್ಲಿ ₹1.81 ಲಕ್ಷ ಕೋಟಿ ಕೇಂದ್ರ ನೆರವು ಹೊಂದಿದೆ. ಇದರಲ್ಲಿ ₹96,067 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು