ನವದೆಹಲಿ: ಕರ್ನಾಟಕದ ರಾಷ್ಟ್ರೀಯ ಹೆದ್ದಾರಿ 373ರ ಬೇಲೂರಿನಿಂದ ಹಾಸನ ವರೆಗಿನ ವಿಭಾಗದಲ್ಲಿ ರಸ್ತೆ ವಿಸ್ತರಣೆಗಾಗಿ ₹698.08 ಕೋಟಿ ಅನುದಾನ ನೀಡಲು ಕೇಂದ್ರ ಸರ್ಕಾರವು ಅನುಮೋದನೆ ನೀಡಿದೆ ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭಾನುವಾರ ಹೇಳಿದ್ದಾರೆ.
2022–23ರ ಯೋಜನೆ ಅಡಿಯಲ್ಲಿ ಈ ಹೆದ್ದಾರಿಯ ವಿಸ್ತರಣೆ ಕಾಮಗಾರಿಯನ್ನು ಕಾರ್ಯಗತಗೊಳಿಸಲಾಗುತ್ತಿದೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ಸಂಚಾರ ದಟ್ಟಣೆ ತಪ್ಪಿಸಲು ಈ ರಸ್ತೆಯನ್ನು ವಿಸ್ತರಣೆ ಮಾಡಬೇಕೆಂಬುದು ಅಲ್ಲಿನ ಸ್ಥಳೀಯರ ಬಹುಕಾಲದ ಬೇಡಿಕೆಯಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.