ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾದಕವಸ್ತು ವೈಭವೀಕರಿಸುವ ಹಾಡುಗಳ ಪ್ರಸಾರ ಬೇಡ: FM Radio ವಾಹಿನಿಗಳಿಗೆ ಎಚ್ಚರಿಕೆ

Last Updated 1 ಡಿಸೆಂಬರ್ 2022, 14:00 IST
ಅಕ್ಷರ ಗಾತ್ರ

ನವದೆಹಲಿ: ಮದ್ಯಪಾನ, ಮಾದಕವಸ್ತು ಮತ್ತು ಬಂದೂಕು ಸಂಸ್ಕೃತಿಯನ್ನು ವೈಭವೀಕರಿಸುವ ಹಾಡುಗಳನ್ನು ಹಾಗೂ ವಿಷಯಗಳನ್ನು ಪ್ರಸಾರ ಮಾಡಬಾರದು ಎಂದು ಕೇಂದ್ರ ಸರ್ಕಾರವು ಎಫ್‌ಎಂ ರೇಡಿಯೊ ವಾಹಿನಿಗಳಿಗೆ ಎಚ್ಚರಿಕೆ ನೀಡಿದೆ.

ಅನುಮತಿ ನೀಡಿಕೆ ಒಪ್ಪಂದದ (ಜಿಒಪಿಎ) ನಿಯಮಗಳು ಮತ್ತು ಷರತ್ತುಗಳನ್ನು ಎಫ್‌ಎಂ ರೇಡಿಯೊ ವಾಹಿನಿಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಮಾರ್ಗಸೂಚಿಯಲ್ಲಿ ಹೇಳಿದೆ.

ಇದನ್ನು ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು ಎಂದೂ ತಿಳಿಸಿದೆ. ಮಾದಕವಸ್ತುಗಳ ಬಳಕೆ ಮತ್ತು ಬಂದೂಕು ಸಂಸ್ಕೃತಿಯನ್ನು ವೈಭವೀಕರಿಸುವ ಹಾಡುಗಳನ್ನು ಕೆಲವು ಎಫ್‌ಎಂ ರೇಡಿಯೊ ವಾಹಿನಿಗಳು ಪ್ರಸಾರ ಮಾಡುತ್ತಿರುವ ಕಾರಣ ಈ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇಂತಹ ವಿಷಯಗಳು ಮಕ್ಕಳ ಮೇಲೆ ಪರಿಣಾಮ ಬೀರುತ್ತವೆ ಎಂದು ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ ಹೇಳಿರುವುದನ್ನೂ ಸಚಿವಾಲಯ ಉಲ್ಲೇಖಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT