ಮಂಗಳವಾರ, ಡಿಸೆಂಬರ್ 6, 2022
21 °C
ರಾಜ್ಯ ಸರ್ಕಾರಗಳಿಗೆ ಸೂಚನೆ

ಎಲ್ಲ ದಿನವೂ ನ್ಯಾಯಬೆಲೆ ಅಂಗಡಿ ತೆರೆಯಲು ಕೇಂದ್ರದ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಾರದ ಎಲ್ಲ ದಿನಗಳಲ್ಲೂ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಬೇಕು ಮತ್ತು ಹೆಚ್ಚು ಅವಧಿ ಕಾರ್ಯನಿರ್ವಹಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರವು ಎಲ್ಲ ರಾಜ್ಯ ಸರ್ಕಾರಗಳಿಗೆ ಭಾನುವಾರ ಸೂಚನೆ ನಡೆಸಿದೆ.

ಬಡವರಿಗೆ ಸಬ್ಸಿಡಿ ರೂಪದಲ್ಲಿ ಮತ್ತು ಉಚಿತವಾಗಿ ಆಹಾರ ಧಾನ್ಯಗಳು ಸಕಾಲದಲ್ಲಿ ಮತ್ತು ಸುರಕ್ಷಿತವಾಗಿ ವಿತರಿಸಲು ಈ ಕ್ರಮದಿಂದ ಅನುಕೂಲವಾಗಲಿದೆ ಎಂದು ಕೇಂದ್ರ ಆಹಾರ ಸಚಿವಾಲಯವು ತಿಳಿಸಿದೆ.

ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಸ್ತುತ ಜಾರಿಗೊಳಿಸಿರುವ ಲಾಕ್‌ಡೌನ್‌ನಿಂದ ನ್ಯಾಯ ಬೆಲೆ ಅಂಗಡಿಗಳ ಕಾರ್ಯನಿರ್ವಹಿಸುವ ಅವಧಿಯನ್ನು ಕಡಿಮೆಗೊಳಿಸಲಾಗಿದೆ. ಇದರಿಂದ, ಫಲಾನುಭವಿಗಳಿಗೆ ಸಕಾಲಕ್ಕೆ ಆಹಾರ ಧಾನ್ಯಗಳು ದೊರೆಯುತ್ತಿಲ್ಲ ಎಂದು ಆಹಾರ ಸಚಿವಾಲಯಕ್ಕೆ ಹಲವು ಸಂಘಟನೆಗಳು ದೂರು ಸಲ್ಲಿಸಿದ್ದವು.

ಇದನ್ನೂ ಓದಿ– ಹೈದರಾಬಾದ್‌ ತಲುಪಿದ ‘ಸ್ಪುಟ್ನಿಕ್ ವಿ’ ಕೋವಿಡ್‌ ಲಸಿಕೆಯ 2ನೇ ಕಂತು

 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು