ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ ಚುನಾವಣೆ: 30 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ

ಕೇಂದ್ರ ಗೃಹ ಸಚಿವಾಲಯದ ನಿರ್ದೇಶನ
Last Updated 27 ಸೆಪ್ಟೆಂಬರ್ 2020, 11:19 IST
ಅಕ್ಷರ ಗಾತ್ರ

ನವದೆಹಲಿ: ಬಿಹಾರದಲ್ಲಿ ನಡೆಯಲಿರುವ ಮೂರು ಹಂತದ ವಿಧಾನಸಭಾ ಚುನಾವಣೆಯ ಭದ್ರತೆಗಾಗಿ ಕೇಂದ್ರ ಸರ್ಕಾರ 30 ಸಾವಿರ ಕೇಂದ್ರೀಯ ಭದ್ರತಾ ಪಡೆಗಳನ್ನು ನಿಯೋಜಿಸಲು ಕೇಂದ್ರ ನಿರ್ದೇಶಿಸಿದೆ.

ಮುಕ್ತ ಹಾಗೂ ಶಾಂತಿಯುತ ಚುನಾವಣೆಗಾಗಿ ಕೇಂದ್ರ ಗೃಹಸಚಿವಾಲಯದ ನಿರ್ದೇಶನದ ಪ್ರಕಾರ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳ 300 ತುಕಡಿಗಳು ಮತ್ತು ರೈಲ್ವೆ ರಕ್ಷಣಾ ಪಡೆಗಳನ್ನು ನಿಯೋಜಿಸಲಾಗಿದೆ.

ಕೇಂದ್ರೀಯ ಮೀಸಲು ಪೊಲೀಸ್ ಪಡೆಯ 80 ಕಂಪನಿಗಳು, ಸಶಸ್ತ್ರ ಸೀಮಾ ಬಲದ 70, ಗಡಿ ಭದ್ರತಾ ಪಡೆಯ 55, ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ 50, ಇಂಡೊ ಟಿಬೆಟಿಯನ್ ಗಡಿ ಪೊಲೀಸ್ ಪಡೆಯ 30 ಹಾಗೂ ಸಶಸ್ತ್ರ ಪೊಲೀಸ್ ಪಡೆಯ 15 ತುಕಡಿಗಳನ್ನು ನಿಯೋಜಿಲಾಗಿದೆ. ಪ್ರತಿ ಕಂಪನಿಯ ಒಂದು ಪಡೆಯಲ್ಲಿ 100 ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ.

ಕೇಂದ್ರೀಯ ಸಶಸ್ತ್ರ ಮೀಸಲು ಪಡೆ ಮತ್ತು ಮೀಸಲು ಪೊಲೀಸ್ ಪಡೆಯ ಒಟ್ಟು 300 ಕಂಪನಿಗಳು ಅಥವಾ 30 ಸಾವಿರ ಸಿಬ್ಬಂದಿಯನ್ನು ನಿಯೋಜಿಸಿರುವ ವಿವಿಧ ಕಡೆಗಳಿಂದ ಕರೆಸಿ ತಕ್ಷಣದಿಂದಲೇ ಚುನಾವಣೆ ಕಾರ್ಯಕ್ಕೆ ನೇಮಿಸುವಂತೆ ಸೂಚಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

243 ಶಾಸಕರ ಆಯ್ಕೆಗಾಗಿ ಅಕ್ಟೋಬರ್ 28, ನವೆಂಬರ್ 3 ಮತ್ತು ನವೆಂಬರ್ 7ರಂದು ಮೂರು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ನವೆಂಬರ್ 10ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT