ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಸ್‌ ಅಧಿಕಾರಿಗಳ ವರ್ಗಾವಣೆ: ಕೇಂದ್ರದ ಕ್ರಮಕ್ಕೆ ಕೇಜ್ರಿವಾಲ್ ಖಂಡನೆ

‘ಒಕ್ಕೂಟ ವ್ಯವಸ್ಥೆಯ ಮೇಲಿನ ಆಕ್ರಮಣ’
Last Updated 18 ಡಿಸೆಂಬರ್ 2020, 5:58 IST
ಅಕ್ಷರ ಗಾತ್ರ

ನವದೆಹಲಿ: ‘ಪಶ್ಚಿಮ ಬಂಗಾಳದ ಮೂವರು ಐಪಿಎಸ್‌ ಅಧಿಕಾರಿಗಳನ್ನು ಕೇಂದ್ರದ ಸೇವೆಗೆ ವರ್ಗಾವಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದೆ. ಇದು ಒಕ್ಕೂಟ ವ್ಯವಸ್ಥೆಯ ಮೇಲಿನ ಆಕ್ರಮಣವಾಗಿದೆ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ.

‘ಪಶ್ಚಿಮ ಬಂಗಾಳ ಆಡಳಿತದಲ್ಲಿ ಕೇಂದ್ರದ ಹಸ್ತಕ್ಷೇಪವನ್ನು ನಾನು ಖಂಡಿಸುತ್ತೇನೆ. ಚುನಾವಣೆಗೆ ಮುನ್ನ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ಕರೆಸಿಕೊಳ್ಳುವ ಮೂಲಕ, ಆಯಾ ರಾಜ್ಯಗಳ ಹಕ್ಕುಗಳನ್ನು ಅತಿಕ್ರಮಿಸಿದಂತಾಗಿದೆ. ಇದು ಒಕ್ಕೂಟದ ಮೇಲಿನ ಆಕ್ರಮಣ ಮತ್ತು ಅಸ್ಥಿರಗೊಳಿಸುವ ಪ್ರಯತ್ನ‘ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಗಾವಲು ಪಡೆಯ ಮೇಲೆ ದಾಳಿ ನಡೆದಿತ್ತು. ಭದ್ರತೆಯ ಲೋಪದ ಕಾರಣ ನೀಡಿ ಈ ಮೂವರು ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಸರ್ಕಾರ ವರ್ಗಾವಣೆ ಮಾಡಿತ್ತು.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಂದ್ರದ ಈ ಕ್ರಮವನ್ನು ಖಂಡಿಸಿದ್ದರು. ‘ಇದು ರಾಜ್ಯದ ಅಧಿಕಾರ ವ್ಯಾಪ್ತಿಯನ್ನು ಅತಿಕ್ರಮಿಸುವ ಪ್ರಯತ್ನ‘ ಎಂದು ಆಕ್ಷೇಪಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT