ಶುಕ್ರವಾರ, ಡಿಸೆಂಬರ್ 9, 2022
21 °C

ಸಿಬಿಐನ ಜಂಟಿ ನಿರ್ದೇಶಕರನ್ನಾಗಿ ರಾಕೇಶ್, ಸಂಪತ್ ಮೀನಾರನ್ನು ಮುಂದುವರಿಸಿದ ಕೇಂದ್ರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ತನಿಖಾ ದಳ (ಸಿಬಿಐ)ದ ಜಂಟಿ ನಿರ್ದೇಶಕರಾಗಿ ರಾಕೇಶ್ ಅಗರವಾಲ್‌ ಮತ್ತು ಸಂಪತ್ ಮೀನಾ ಅವರ ಅಧಿಕಾರಾವಧಿಯನ್ನು ಕೇಂದ್ರ ಸರ್ಕಾರವು ವಿಸ್ತರಿಸಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ.

ರಾಕೇಶ್‌ ಅಗರವಾಲ್‌ ಅವರ ಅಧಿಕಾರಾವಧಿಯನ್ನು ಸೆಪ್ಟೆಂಬರ್ 2 ರಿಂದ ಆರು ತಿಂಗಳ ಅವಧಿಗೆ ವಿಸ್ತರಿಸಲು ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಅಗರವಾಲ್‌ ಅವರು ಹಿಮಾಚಲ ಪ್ರದೇಶ ಕೇಡರ್‌ನ 1994ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿ.

1994ರ ಬ್ಯಾಚ್‌ನ ಜಾರ್ಖಂಡ್ ಕೇಡರ್‌ನ ಐಪಿಎಸ್ ಅಧಿಕಾರಿ ಮೀನಾ ಅವರ ಅಧಿಕಾರಾವಧಿಯನ್ನು 2024ರ ಸೆಪ್ಟೆಂಬರ್ 21 ರವರೆಗೆ ವಿಸ್ತರಿಸಲು ಸಮಿತಿಯು ಅನುಮೋದನೆ ನೀಡಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು