ನವದೆಹಲಿ: ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ಮಾತ್ರ ರೈತರ ಅಗತ್ಯಗಳ ಬಗ್ಗೆ ಅಸಡ್ಡೆ ಹೊಂದಿದೆ ಎಂದು ಶಿರೋಮಣಿ ಅಕಾಲಿದಳದ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ ಹರ್‌ಸಿಮ್ರತ್ ಕೌರ್ ಬಾದಲ್ ವಾಗ್ದಾಳಿ ನಡೆಸಿದ್ದಾರೆ.

‘ಹಲವು ರೈತರು ಪ್ರತಿಭಟನೆ ವೇಳೆಯೇ ಪ್ರಾಣ ಬಿಟ್ಟಿದ್ದಾರೆ. ಅನೇಕರು ಈಗಲೂ ರಾಜಧಾನಿಯ ಗಡಿಗಳಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಈ ಸರ್ಕಾರ (ಕೇಂದ್ರ) ಮಾತ್ರ ಅವರ ಬಗ್ಗೆ ಅಸಡ್ಡೆ ತೋರುತ್ತಿದೆ. ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವವರೆಗೂ ನಾವು ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ’ಎಂದು ಅವರು ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಗುಡುಗಿದ್ದಾರೆ.

ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿ ಸಂಚಾರ ಪೊಲೀಸರು ಶುಕ್ರವಾರ ನಿರ್ದಿಷ್ಟ ರಸ್ತೆಗಳನ್ನು ಮುಚ್ಚುವ ಬಗ್ಗೆ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಗಳಿಂದಾಗಿ ಆಗುವ ಅನಾನುಕೂಲತೆಯಿಂದ ಪಾರಾಗಲು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದ್ದಾರೆ.

ಪಕ್ಷದ ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್ ಅವರ ನೇತೃತ್ವದಲ್ಲಿ ಶಿರೋಮಣಿ ಅಕಾಲಿದಳವು ಗುರುದ್ವಾರ ತಲಬ್ ಗಂಜ್ ಸಾಹಿಬ್‌ನಿಂದ ಸಂಸತ್ ಭವನದವರೆಗೆ ರ್‍ಯಾಲಿಗೆ ಕರೆ ನೀಡಿತ್ತು.

ರಾಷ್ಟ್ರ ರಾಜಧಾನಿಯ ವಿವಿಧ ಪ್ರದೇಶಗಳಲ್ಲಿ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದು, ವಾಹನಗಳನ್ನು ತಪಾಸಣೆ ಮಾಡಿದ ನಂತರ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ ಎಂದು ಹಿರಿಯ ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಣರಾಜ್ಯೋತ್ಸವದ ದಿನ ರೈತರ ಪ್ರತಿಭಟನೆ ವೇಳೆ ನಡೆದಂತೆ ಅಹಿತಕರ ಘಟನೆ ಮರುಕಳಿಸದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.