ಶನಿವಾರ, ಜೂನ್ 19, 2021
28 °C
ಕರ್ನಾಟಕ ಸೇರಿದಂತೆ 5 ರಾಜ್ಯಗಳಲ್ಲಿ ‘14567’ ಸೇವೆ

ಕೋವಿಡ್‌: ವೃದ್ಧರಿಗೆ ಸಹಾಯವಾಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್–19 ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಪರಿಹರಿಸಲು ಕರ್ನಾಟಕ ಸೇರಿದಂತೆ ಐದು ರಾಜ್ಯಗಳಲ್ಲಿ ಕೇಂದ್ರ ಸರ್ಕಾರವು ವೃದ್ಧರಿಗಾಗಿ ಸಹಾಯವಾಣಿಯನ್ನು ಆರಂಭಿಸಿದೆ.

ಸಾಂಕ್ರಾಮಿಕ ರೋಗದ ಸಮಯದಲ್ಲಿ ಹಿರಿಯ ನಾಗರಿಕರ ವಿರುದ್ಧ ನಡೆಯುವ ದೌರ್ಜನ್ಯ ತಡೆಯಲು ಹಾಗೂ ಅವರಿಗೆ ಭಾವನಾತ್ಮಕ ಬೆಂಬಲ ನೀಡುವ ಕೆಲಸವನ್ನೂ ಸಹಾಯವಾಣಿ ಮಾಡಲಿದೆ.

‘14567’– ಇದು ಸಹಾಯವಾಣಿಯ ದೂರವಾಣಿ ಸಂಖ್ಯೆಯಾಗಿದ್ದು, ಸಹಾಯವಾಣಿಗೆ ‘ಎಲ್ಡರ್‌ಲೈನ್’ ಎಂದೂ ಹೆಸರಿಸಲಾಗಿದೆ. 2019ರಲ್ಲಿ ತೆಲಂಗಾಣದಲ್ಲಿ ವೃದ್ಧರಿಗೆ ಸಹಾಯವಾಣಿ ಆರಂಭಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ ‘ಎಲ್ಡರ್‌ಲೈನ್’ ಕಾರ್ಯ ನಿರ್ವಹಿಸಲಿದೆ.

ಟಾಟಾ ಟ್ರಸ್ಟ್ ಮತ್ತು ಎನ್‌ಎಸ್‌ಇ ಫೌಂಡೇಷನ್ ಸಹಾಯದಿಂದ ಈ ಸಹಾಯವಾಣಿಯನ್ನು ಕಾರ್ಯಗತಗೊಳಿಸಲಾಗಿದೆ. ‘ಎಲ್ಡರ್‌ಲೈನ್’ ಸಹಾಯವಾಣಿಯು ಉತ್ತರ ಪ್ರದೇಶ, ಮಧ್ಯಪ್ರದೇಶ, ಕರ್ನಾಟಕ, ರಾಜಸ್ಥಾನ ಮತ್ತು ತಮಿಳನಾಡಿನಲ್ಲಿ ಕಾರ್ಯನಿರ್ವಹಿಸುತ್ತಿವೆ. ಮೇ ಅಂತ್ಯದ ವೇಳೆಗೆ ಎಲ್ಲಾ ರಾಜ್ಯಗಳಲ್ಲೂ ಈ ಸಹಾಯವಾಣಿ ಕಾರ್ಯಾರಂಭ ಮಾಡಲಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು