ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಎಚ್‌ಜಿ ಸದಸ್ಯೆಯರು ವಾರ್ಷಿಕ ಲಕ್ಷ ರೂಪಾಯಿ ಗಳಿಸುವಂತಾಗಲು ನೆರವು: ಕೇಂದ್ರ

ಕೇಂದ್ರ ಸರ್ಕಾರದಿಂದ ನೂತನ ಕಾರ್ಯಕ್ರಮಕ್ಕೆ ಚಾಲನೆ
Last Updated 30 ಅಕ್ಟೋಬರ್ 2021, 10:55 IST
ಅಕ್ಷರ ಗಾತ್ರ

ನವದೆಹಲಿ: ಸ್ವಸಹಾಯ ಸಂಘಗಳ (ಎಸ್‌ಎಚ್‌ಜಿ) ಸದಸ್ಯರಾಗಿರುವ ಮಹಿಳೆಯರು ವಾರ್ಷಿಕವಾಗಿ ₹ 1 ಲಕ್ಷ ಗಳಿಸಲು ಸಾಧ್ಯವಾಗುವಂತೆ ಮಾಡುವ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ.

ಮಹಿಳಾ ಸ್ವಸಹಾಯ ಗುಂಪುಗಳ ವಿವಿಧ ಮಾದರಿಗಳ ಕಾರ್ಯನಿರ್ವಹಣೆ ಕುರಿತು ನಡೆಸಲಾದ ಅಧ್ಯಯನ ಆಧರಿಸಿ ಈ ನೂತನ ಕಾರ್ಯಕ್ರಮ ಅನುಷ್ಠಾನಕ್ಕೆ ಸಂಬಂಧಿಸಿ ರಾಜ್ಯಗಳಿಗೆ ಸಲಹೆ–ಸೂಚನೆಗಳನ್ನು ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.

‘ಮಹಿಳೆಯರ ಆರ್ಥಿಕ ಶಕ್ತಿಯನ್ನು ಹೆಚ್ಚಿಸಬೇಕು ಎಂಬುದೇ ಈ ಕಾರ್ಯಕ್ರಮದ ಗುರಿ. ಗ್ರಾಮೀಣ ಭಾಗದ ಸ್ವಸಹಾಯ ಗುಂಪುಗಳ ಸದಸ್ಯರಾಗಿರುವ 2.5 ಕೋಟಿ ಮಹಿಳೆಯರಿಗೆ ಎರಡು ವರ್ಷಗಳ ಅವಧಿಗೆ ಈ ಕಾಯಕ್ರಮದಡಿ ನೆರವು ನೀಡಲಾಗುವುದು’ ಎಂದೂ ಸಚಿವಾಲಯ ತಿಳಿಸಿದೆ.

‘ಜೀವನೋಪಾಯಕ್ಕೆ ಅಗತ್ಯವಿರುವ ಚಟುವಟಿಕೆಗಳಿಗೆ ಒತ್ತು ನೀಡಲಾಗುವುದು. ಇಂಥ ಚಟುವಟಿಕೆಗಳನ್ನು ಕೈಗೊಳ್ಳುವವರು ವರ್ಷಕ್ಕೆ ₹ 1 ಲಕ್ಷ ಗಳಿಸುವುದು ಸಾಧ್ಯವಾಗುವಂತೆ ಮಾಡಲು ನೆರವು ನೀಡಲಾಗುವುದು’ ಎಂದು ತಿಳಿಸಿದೆ.

‘ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್‌’ ಯೋಜನೆಯಡಿ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. 70 ಲಕ್ಷ ಸ್ವಸಹಾಯ ಗುಂಪುಗಳನ್ನು ಸ್ಥಾಪಿಸಲಾಗಿದ್ದು, 7.7 ಕೋಟಿ ಮಹಿಳೆಯರು ಸದಸ್ಯರಿದ್ದಾರೆ. ಸ್ವಸಹಾಯ ಗುಂಪುಗಳಿಗೆ ನೆರವು ನೀಡುವ ಸಲುವಾಗಿ ವಾರ್ಷಿಕ ₹ 80,000 ಕೋಟಿ ಅನುದಾನ ಒದಗಿಸಲಾಗುವುದು ಎಂದೂ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT