ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರಿ ನೌಕರರಿಗೆ ಶೇ 4ರಷ್ಟು ತುಟ್ಟಿಭತ್ಯೆ ಏರಿಕೆ?

Last Updated 5 ಫೆಬ್ರುವರಿ 2023, 21:45 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕೇಂದ್ರ ಸರ್ಕಾರ ತನ್ನ ನೌಕರರು, ಪಿಂಚಣಿದಾರರಿಗೆ ಶೇ 4ರಷ್ಟು ತುಟ್ಟಿಭತ್ಯೆ ಏರಿಸುವ ಸಾಧ್ಯತೆಗಳಿದ್ದು, ತುಟ್ಟಿಭತ್ಯೆ ಪ್ರಮಾಣವು ಈಗಿನ ಶೇ 38ರಿಂದ ಒಟ್ಟು ಶೇ 42ಕ್ಕೆ ಏರಿಕೆಯಾಗುವ ಸಂಭವವಿದೆ.

ಕಾರ್ಮಿಕ ಸಚಿವಾಲಯದ ಭಾಗವಾದ ಕಾರ್ಮಿಕ ಮಂಡಳಿಯು ಪ್ರಕಟಿಸುವ ಕೈಗಾರಿಕಾ ಕಾರ್ಮಿಕರ ಗ್ರಾಹಕರ ದರ ಸೂಚ್ಯಂಕವನ್ನು (ಸಿಪಿಐ–ಐಡಬ್ಲ್ಯು) ಆಧರಿಸಿ ತುಟ್ಟಿಭತ್ಯೆ ಪ್ರಮಾಣವನ್ನು ಪರಿಷ್ಕರಿಸಲಾಗಿದೆ ಎಂದು ಹೇಳಲಾಗಿದೆ.

‘ಜ.1, 2023ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಪ್ರಮಾಣ ಏರಿಕೆ ಆಗ
ಬಹುದು’ ಎಂದು ಅಖಿಲ ಭಾರತ ರೈಲ್ವೆಮೆನ್‌ ಫೆಡರೇಷನ್‌ನ ಪ್ರಧಾನ ಕಾರ್ಯದರ್ಶಿ ಶಿವಗೋಪಾಲ್ ಮಿಶ್ರಾ ಅವರು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT