ಮಂಗಳವಾರ, ಮಾರ್ಚ್ 28, 2023
30 °C

ಪ್ರಾದೇಶಿಕ ಭಾಷೆಗಳಲ್ಲಿ ಕರಡು ಅಧಿಸೂಚನೆ ನಿರ್ದೇಶನ ಮರುಪರಿಶೀಲಿಸಲು ಕೇಂದ್ರ ಮನವಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪರಿಸರದ ಮೇಲಿನ ಪರಿಣಾಮ ವಿಶ್ಲೇಷಣೆ–2020 (ಇಐಎ) ಕರಡು ಅಧಿಸೂಚನೆಯನ್ನು 22 ಭಾಷೆಗಳಲ್ಲಿ ಪ್ರಕಟಿಸಬೇಕೆಂದು ನೀಡಿರುವ ನಿರ್ದೇಶವನ್ನು ಮರು ಪರಿಶೀಲಿಸುವಂತೆ ದೆಹಲಿ ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ಅರ್ಜಿ ಸಲ್ಲಿಸಿದೆ.

ಕೇಂದ್ರದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎನ್‌.ಪಟೇಲ್ ಮತ್ತು ನ್ಯಾಯಮೂರ್ತಿ ಪ್ರತೀಕ್‌ ಜಲಾನ್ ಅವರನ್ನೊಳಗೊಂಡ ಪೀಠ, ಪ್ರಾದೇಶಿಕ ಭಾಷೆಗಳಲ್ಲಿ ಕರಡು ಪ್ರಕಟಿಸಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದ ಪರಿಸರ ಕಾರ್ಯಕರ್ತರಿಗೆ ‌ಶುಕ್ರವಾರ ನೋಟಿಸ್ ನೀಡಿದೆ. ಸೆಪ್ಟೆಂಬರ್ 23ರೊಳಗೆ ನೋಟಿಸ್‌ಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. 

ಪರಿಸರ ಮೇಲಿನ ಪರಿಣಾಮ ವಿಶ್ಲೇಷಣೆ –2020 ಕರಡು ಅಧಿಸೂಚನೆಯನ್ನು 22 ಪ್ರಾದೇಶಿಕ ಭಾಷೆಗಳಲ್ಲಿ ಪ್ರಕಟಿಸಲು ಸೂಚಿಸುವಂತೆ ಕೋರಿ ಪರಿಸರ ಕಾರ್ಯಕರ್ತ ವಿಕ್ರಾಂತ್ ತೊಂಗಾಡ್ ಎಂಬುವರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಪರಿಶೀಲಿಸಿದ ನ್ಯಾಯಾಲಯ,  ಜೂನ್‌ 30ರೊಳಗೆ ಕರಡು ಪ್ರತಿಯನ್ನು ಪ್ರಾದೇಶಿಕ ಭಾಷೆಗಳಲ್ಲಿ ಪ್ರಕಟಿಸಲು ನಿರ್ದೇಶನ ನೀಡಿತ್ತು. ನಂತರ ಆ ಗಡುವನ್ನು ಆಗಸ್ಟ್ 11ರವರೆಗೆ ವಿಸ್ತರಿಸಿತ್ತು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು