ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಪ್ರೀಂ ಕೋರ್ಟ್‌ಗೆ ಇಬ್ಬರು ನ್ಯಾಯಮೂರ್ತಿಗಳ ನೇಮಕ: ಈಗ ‘ಪೂರ್ಣ ಬಲ’

Last Updated 10 ಫೆಬ್ರುವರಿ 2023, 5:50 IST
ಅಕ್ಷರ ಗಾತ್ರ

ನವದೆಹಲಿ: ಹೈಕೋರ್ಟ್‌ನ ಇಬ್ಬರು ಮುಖ್ಯ ನ್ಯಾಯಮೂರ್ತಿಗಳನ್ನು ಶುಕ್ರವಾರ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಸುಪ್ರೀಂ ಕೋರ್ಟ್‌ನ 34 ನ್ಯಾಯಮೂರ್ತಿಗಳ ಸ್ಥಾನಗಳೂ ಭರ್ತಿಯಾದಂತಾಗಿದೆ.

‘ಭಾರತದ ಸಂವಿಧಾನದ ನಿಬಂಧನೆಗಳ ಪ್ರಕಾರ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳು ಇಬ್ಬರು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ನೇಮಿಸಿದ್ದಾರೆ. ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್, ಗುಜರಾತ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ನೇಮಿಸಲಾಗಿದೆ. ಅವರಿಗೆ ನನ್ನ ಶುಭಾಶಯಗಳು’ ಎಂದು ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಇಬ್ಬರ ಹೆಸರುಗಳನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಕಳೆದ ತಿಂಗಳು ಶಿಫಾರಸು ಮಾಡಿತ್ತು.

ಅವರು ಪ್ರಮಾಣವಚನ ಸ್ವೀಕರಿಸಿದ ನಂತರ, ಮುಖ್ಯ ನ್ಯಾಯಮೂರ್ತಿಯೂ ಸೇರಿದಂತೆ 34 ನ್ಯಾಯಾಧೀಶರ ಸಂಪೂರ್ಣ ಬಲವನ್ನು ಸುಪ್ರೀಂ ಕೋರ್ಟ್‌ ಪಡೆದುಕೊಳ್ಳಲಿದೆ.

ಕಳೆದ ವಾರ ಸುಪ್ರೀಂ ಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳು ನೇಮಕಗೊಂಡಿದ್ದರು.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT