ಉತ್ತರಾಖಂಡ: ಅರಣ್ಯದಲ್ಲಿ ಬೆಂಕಿ, ಎನ್‌ಡಿಆರ್‌ಎಫ್ ತಂಡ ರವಾನೆಗೆ ಆದೇಶ

ನವದೆಹಲಿ: ‘ಉತ್ತರಾಖಂಡದ ಅರಣ್ಯ ಪ್ರದೇಶದಲ್ಲಿನ ಬೆಂಕಿಯನ್ನು ನಂದಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ತಂಡಗಳು ಹಾಗೂ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲು ಕೇಂದ್ರ ಸರ್ಕಾರವು ಆದೇಶಿಸಿದೆ’ ಎಂದು ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
‘ನಾನು ಉತ್ತರಾಖಂಡದ ಮುಖ್ಯಮಂತ್ರಿ ಥೀರತ್ ಸಿಂಗ್ ರಾವತ್ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದೆ. ಅರಣ್ಯ ಪ್ರದೇಶದಲ್ಲಿನ ಬೆಂಕಿ ನಂದಿಸಲು, ಆಸ್ತಿಪಾಸ್ತಿ ಸಂಕ್ಷಣೆಗೆ ಕೇಂದ್ರವು ತಕ್ಷಣವೇ ಎನ್‌ಡಿಆರ್‌ಎಫ್ ತಂಡಗಳು ಹಾಗೂ ಹೆಲಿಕಾಪ್ಟರ್‌ಗಳನ್ನು ಕಳುಹಿಸಲು ಆದೇಶ ಹೊರಡಿಸಿದೆ’ ಎಂದು ಅಮಿತ್ ಶಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಕಳೆದ ಕೆಲ ದಿನಗಳಲ್ಲಿ ಉತ್ತರಾಖಂಡದ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹಲವು ಜಿಲ್ಲೆಗಳಿಗೂ ಬೆಂಕಿ ವ್ಯಾಪಿಸಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.