ಭಾರತದ ತಪ್ಪಾದ ನಕಾಶೆ ತೋರಿಸುವ ಲಿಂಕ್ ಅಳಿಸಿಹಾಕಲು ವಿಕಿಪೀಡಿಯಾಗೆ ಕೇಂದ್ರ ಸೂಚನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರವನ್ನು ತಪ್ಪಾಗಿ ತೋರಿಸುವ ನಕಾಶೆಯ ಲಿಂಕ್ ಅನ್ನು ಅಳಿಸಿಹಾಕುವಂತೆ ವಿಕಿಪೀಡಿಯಾಗೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದು ಮೂಲಗಳು ಹೇಳಿವೆ.
‘ಐಟಿ ಕಾಯ್ದೆ 2000’ ಇದರ ಸೆಕ್ಷನ್ 69ಎ ಅಡಿಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ವಿಕಿಪೀಡಿಯಾಗೆ ಆದೇಶ ನೀಡಿದೆ.
ನಕಾಶೆಯಲ್ಲಿ ತಪ್ಪಾಗಿ ಬಿಂಬಿಸಿರುವ ಬಗ್ಗೆ ಟ್ವಿಟರ್ ಬಳಕೆದಾರರೊಬ್ಬರು ಗಮನಸೆಳೆದಿದ್ದರು. ಭಾರತ–ಭೂತಾನ್ ಬಾಂಧವ್ಯಕ್ಕೆ ಸಂಬಂಧಿಸಿದ ವಿಕಿಪೀಡಿಯಾ ಪುಟದಲ್ಲಿ ಜಮ್ಮು–ಕಾಶ್ಮೀರದ ನಕಾಶೆಯನ್ನು ತಪ್ಪಾಗಿ ತೋರಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಸರ್ಕಾರವನ್ನು ಮನವಿ ಮಾಡಿದ್ದರು.
ಇದನ್ನು ಗಮನಿಸಿದ ಸಚಿವಾಲಯವು ನವೆಂಬರ್ 27ರಂದು ವಿಕಿಪೀಡಿಯಾಗೆ ಆದೇಶ ನೀಡಿತ್ತು. ಭಾರತದ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಉಲ್ಲಂಘಿಸಲಾಗಿದೆ ಎಂದು ಹೇಳಿತ್ತು.
ಒಂದು ವೇಳೆ ಲಿಂಕ್ ಅಳಿಸಿಹಾಕದಿದ್ದರೆ ಕಂಪನಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ ಎಂದೂ ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.