ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

5 ರಾಜ್ಯಗಳ ಕೋವಿಡ್ ಲಸಿಕಾ ಪ್ರಮಾಣಪತ್ರದ ಮೇಲೆ ಮೋದಿ ಚಿತ್ರ ಮುದ್ರಿಸಲು ಚಿಂತನೆ

Last Updated 26 ಮಾರ್ಚ್ 2022, 8:05 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶ ಸೇರಿದಂತೆ ಸದ್ಯವಿಧಾನಸಭೆ ಚುನಾವಣೆ ಮುಕ್ತಾಯವಾಗಿರುವ ಐದು ರಾಜ್ಯಗಳಲ್ಲಿ,ಕೋವಿಡ್-19 ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಪ್ರಕಟಿಸುವುದನ್ನು ಪುನರಾರಂಭಿಸಲು ಕೇಂದ್ರ ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.

ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ, ಪಂಜಾಬ್ ಮತ್ತು ಮಣಿಪುರದಲ್ಲಿ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಜನವರಿ 8ರಿಂದ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿಯವರ ಚಿತ್ರವನ್ನು ತೆಗೆಯಲಾಗಿತ್ತು.

ಈ ಐದು ರಾಜ್ಯಗಳಲ್ಲಿ ಆದ್ಯತೆಯ ಮೇರೆಗೆ ಕೋವಿಡ್ ಲಸಿಕಾ ಪ್ರಮಾಣಪತ್ರದಲ್ಲಿ ಮೋದಿಯವರ ಚಿತ್ರವನ್ನು ಮುದ್ರಿಸುವ ಇರಾದೆಯನ್ನು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಹೊಂದಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

'ಈ ಐದು ರಾಜ್ಯಗಳ ಜನರಿಗೆ ನೀಡಲಾಗುವ ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೊವನ್ನು ಸೇರಿಸಲು ಕೋವಿನ್ ಪೋರ್ಟಲ್‌ನಲ್ಲಿ ಅಗತ್ಯ ಬದಲಾವಣೆಯನ್ನು ಮಾಡಲಾಗುವುದು' ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT