ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರಿಗೆ ಕೇಂದ್ರ ಸರ್ಕಾರ ಬುಧವಾರದಿಂದ ಅನ್ವಯವಾಗುವಂತೆ ಝಡ್ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ ಎಂದು ವರದಿಯಾಗಿದೆ.

ಕೇಂದ್ರ ಸರ್ಕಾರವು ದ್ರೌಪದಿ ಮುರ್ಮುಗೆ ಕೇಂದ್ರ ಮೀಸಲು ಪೊಲೀಸ್ ಪಡೆಗಳಿಂದ (ಸಿಆರ್‌ಪಿಎಫ್) ಝಡ್ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ. ಇಂದಿನಿಂದಲೇ ಇದು ಜಾರಿಗೆ ಬರಲಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ಬುಡಕಟ್ಟು ಸಮುದಾಯದ ಗಟ್ಟಿ ಧ್ವನಿ ದ್ರೌಪದಿ ಮುರ್ಮು

ಜಾರ್ಖಂಡ್‌ನ ರಾಜ್ಯಪಾಲರಾಗಿದ್ದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯನ್ನಾಗಿ ಬಿಜೆಪಿ ಮಂಗಳವಾರ ಘೋಷಿಸಿತ್ತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿತ್ತು.

ಇದಕ್ಕೂ ಮುನ್ನ, ಪ್ರತಿಪಕ್ಷಗಳು ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಅವರನ್ನು ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಿಸಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.