ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒತ್ತಾಯಪೂರ್ವಕವಾಗಿ ಯಾರಿಗೂ ಲಸಿಕೆ ನೀಡುವುದಿಲ್ಲ: ಸುಪ್ರೀಂಗೆ ಕೇಂದ್ರ ಹೇಳಿಕೆ

Last Updated 18 ಜನವರಿ 2022, 3:03 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಒತ್ತಾಯದಿಂದ ಯಾರಿಗೂ ಲಸಿಕೆ ನೀಡುವುದಿಲ್ಲ. ಅಂತಹ ಯಾವುದೇ ಸೂಚನೆಯನ್ನು ಕೇಂದ್ರ ಸರ್ಕಾರ ಅಥವಾ ಆರೋಗ್ಯ ಸಚಿವಾಲಯ ಹೊರಡಿಸಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಹೇಳಿಕೆ ನೀಡಿದೆ.

ಲಸಿಕೆ ಪಡೆಯುವುದನ್ನು ಕಡ್ಡಾಯ ಮಾಡಲಾಗುತ್ತಿದೆ ಮತ್ತು ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುತ್ತಿದೆ ಎಂದು ಇವಾರ ಫೌಂಡೇಶನ್ ಎಂಬ ಎನ್‌ಜಿಒ ಒಂದು ಸಲ್ಲಿಸಿದ್ದ ಅರ್ಜಿಗೆ ಕೇಂದ್ರ ಸರ್ಕಾರ ಈ ಉತ್ತರ ನೀಡಿದೆ.

ಲಸಿಕೆ ನೀಡುವುದು ಮತ್ತು ಲಸಿಕೆ ಪಡೆದ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸುವ ಕ್ರಮವನ್ನು ಎಲ್ಲಿಯೂ ಜಾರಿಗೆ ತಂದಿಲ್ಲ.

ಜನರ ಹಿತಾಸಕ್ತಿಯಿಂದ ಮತ್ತು ಕೊರೊನಾ ಸೋಂಕು ಎಲ್ಲೆಡೆ ಹರಡುವುದನ್ನು ತಪ್ಪಿಸಲು ಲಸಿಕೆ ಪಡೆಯುವುದು ಮತ್ತು ಲಸಿಕೆ ಪ್ರಮಾಣಪತ್ರ ಹೊಂದಿರುವುದನ್ನು ಆರೋಗ್ಯ ಸಚಿವಾಲಯ ಅಭಿಯಾನ ಕೈಗೊಂಡಿದೆ. ಆದರೆ ಒತ್ತಾಯದಿಂದ ಯಾರ ಮೇಲೂ ಅದನ್ನೂ ಹೇರಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ಎಲ್ಲರೂ ಲಸಿಕೆ ಪಡೆದು ಕೋವಿಡ್ ಸೋಂಕಿನ ವಿರುದ್ಧ ಹೋರಾಡುವಂತೆ ಸೂಚಿಸಲಾಗಿದೆ. ಆದರೆ ಯಾರಿಗೂ ಅವರ ಇಚ್ಛೆಗೆ ವಿರುದ್ಧವಾಗಿ ಲಸಿಕೆ ನೀಡಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT