ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್‌ನಲ್ಲಿ ನಾಗರಿಕ ವಿಮಾನಯಾನ ಸಂಶೋಧನಾ ಸಂಸ್ಥೆ: ಕಿಶನ್‌ ರೆಡ್ಡಿ

Last Updated 4 ಮಾರ್ಚ್ 2023, 14:01 IST
ಅಕ್ಷರ ಗಾತ್ರ

ಹೈದರಾಬಾದ್‌: ಕೇಂದ್ರ ಸರ್ಕಾರವು ಅಂದಾಜು ₹400 ಕೋಟಿ ವೆಚ್ಚದಲ್ಲಿ ಇಲ್ಲಿನ ಬೆಗಂಪೇಟೆ ವಿಮಾನ ನಿಲ್ದಾಣದಲ್ಲಿ ನಾಗರಿಕ ವಿಮಾನಯಾನ ಸಂಶೋಧನಾ ಸಂಸ್ಥೆಯನ್ನು (ಸಿಎಆರ್‌ಒ) ಸ್ಥಾಪಿಸಲಿದೆ ಎಂದು ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜಿ. ಕಿಶನ್‌ ರೆಡ್ಡಿ ಹೇಳಿದ್ದಾರೆ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧೀನದಲ್ಲಿ ಸ್ಥಾಪಿಸಲಾಗುವ ಈ ಕೇಂದ್ರದಲ್ಲಿ ವಿಮಾನಯಾನ ಕ್ಷೇತ್ರಕ್ಕೆ ಸಂಬಂಧಿಸಿದ ಸಂಶೋಧನೆಗಳು ನಡೆಯಲಿವೆ ಎಂದೂ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ವರ್ಷದ ಜುಲೈನಿಂದಲೇ ಇಲ್ಲಿ ಸಂಶೋಧನಾ ಕಾರ್ಯಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ ಎಂದೂ ಸಚಿವರು ವಿವರಿಸಿದ್ದಾರೆ.

ವಿಮಾನ ನಿಲ್ದಾಣಗಳು, ಏರ್‌ ಟ್ರಾಫಿಕ್‌ ಮ್ಯಾನೇಜ್‌ಮೆಂಟ್‌, ಸೈಬರ್‌ ಸುರಕ್ಷೆ ಸೇರಿದಂತೆ ವಿವಿಧ ವಿಷಯಗಳ ಕುರಿತೂ ಈ ಸಂಸ್ಥೆಯಲ್ಲಿ ಸಂಶೋಧನೆ ನಡೆಯಲಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT