ದೆಹಲಿ:ಮನೆ ಬಾಗಿಲಿಗೆ ಪಡಿತರ ಯೋಜನೆಗೆ ಕೇಂದ್ರ ತಡೆ

ನವದೆಹಲಿ: ದೆಹಲಿಯಲ್ಲಿ ಜನರ ಮನೆ ಬಾಗಿಲಿಗೇ ಪಡಿತರ ತಲುಪಿಸಲು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸರ್ಕಾರ ರೂಪಿಸಿದ್ದ ಯೋಜನೆಯನ್ನು ಕೇಂದ್ರ ಸರ್ಕಾರ ತಡೆ ಹಿಡಿದಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.
‘ಯೋಜನೆಯನ್ನು ಜಾರಿಗೊಳಿಸುವ ಮುನ್ನ, ಕೇಂದ್ರದಿಂದ ಅನುಮೋದನೆ ಪಡೆದಿಲ್ಲ ಎಂಬ ಕಾರಣ ನೀಡಿ ಇಂಥ ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿಸಿವೆ.
ಮಹತ್ವಾಕಾಂಕ್ಷೆಯ ಈ ಯೋಜನೆಗೆ ಮುಂದಿನ ವಾರ ಚಾಲನೆ ನೀಡಲು ದೆಹಲಿ ಸರ್ಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿತ್ತು ಎಂದು ಇವೇ ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.