ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌–19 ಪ್ರಸರಣ ನಿಯಂತ್ರಣ: ಕೇರಳ, ಮಹಾರಾಷ್ಟ್ರಕ್ಕೆ ತಜ್ಞರ ತಂಡ

ಕೇಂದ್ರ ಆರೋಗ್ಯ ಸಚಿವಾಲಯ ನಿರ್ಧಾರ
Last Updated 2 ಫೆಬ್ರುವರಿ 2021, 7:50 IST
ಅಕ್ಷರ ಗಾತ್ರ

ನವದೆಹಲಿ: ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಕೋವಿಡ್‌–19 ಪ್ರಸರಣ ನಿಯಂತ್ರಣಕ್ಕೆ ಬರುತ್ತಿಲ್ಲ. ಈ ಪಿಡುಗಿನ ಪ್ರಸರಣ ತಡೆಯಲು ಸ್ಥಳೀಯ ಆರೋಗ್ಯ ಇಲಾಖೆ ಸಿಬ್ಬಂದಿಗೆ ನೆರವು–ಮಾರ್ಗದರ್ಶನ ನೀಡುವ ಸಲುವಾಗಿತಜ್ಞರನ್ನು ಒಳಗೊಂಡ ತಂಡಗಳನ್ನು ಈ ರಾಜ್ಯಗಳಿಗೆ ಕಳುಹಿಸಲು ಕೇಂದ್ರ ಆರೋಗ್ಯ ಸಚಿವಾಲಯ ನಿರ್ಧರಿಸಿದೆ.

ದೇಶದ ಅನೇಕ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್‌–19 ಪ್ರಕರಣಗಳು, ಸಾವಿನ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ. ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಮಾತ್ರ ಅಧಿಕ ಸಂಖ್ಯೆಯ ಪ್ರಕರಣಗಳು ವರದಿಯಾಗುತ್ತಿವೆ ಎಂದು ಸಚಿವಾಲಯ ತಿಳಿಸಿದೆ.

‘ದೇಶದಲ್ಲಿ ಕಂಡುಬರುತ್ತಿರುವ ಕೋವಿಡ್‌ ಪ್ರಕರಣಗಳ ಪೈಕಿ ಶೇ 70ರಷ್ಟು ಪ್ರಕರಣಗಳು ಈ ಎರಡು ರಾಜ್ಯಗಳಿಂದಲೇ ವರದಿಯಾಗುತ್ತಿವೆ’ ಎಂದೂ ಹೇಳಿದೆ.

ನವದೆಹಲಿಯಲ್ಲಿರುವ ನ್ಯಾಷನಲ್‌ ಸೆಂಟರ್‌ ಫಾರ್‌ ಡಿಸೀಸ್‌ ಕಂಟ್ರೋಲ್‌ (ಎನ್‌ಸಿಡಿಸಿ) ಸಂಸ್ಥೆಯ ತಜ್ಞರಿರುವ ತಂಡವನ್ನು ಮಹಾರಾಷ್ಟ್ರಕ್ಕೆ ಕಳುಹಿಸಲಾಗುತ್ತಿದೆ.

ಕೇರಳಕ್ಕೆ ತೆರಳುವ ತಂಡದಲ್ಲಿ ನವದೆಹಲಿಯ ಲೇಡಿ ಹಾರ್ಡಿಂಜ್‌ ಮೆಡಿಕಲ್‌ ಕಾಲೇಜ್‌ನ ವೈದ್ಯರು, ಆರೋಗ್ಯ ಸಚಿವಾಲಯದ ಅಧಿಕಾರಿಗಳು ಇರಲಿದ್ದಾರೆ. ಇವರಿಗೆ ತಿರುವನಂತಪುರದಲ್ಲಿರುವ ಆರೋಗ್ಯ ಸಚಿವಾಲಯದ ಪ್ರಾದೇಶಿಕ ಕಚೇರಿಯ ಅಧಿಕಾರಿಗಳು ನೆರವಾಗುವರು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT