ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು: ಸರ್ವ ಪಕ್ಷ ಸಭೆ ಕರೆದ ಕೇಂದ್ರ

Last Updated 19 ಜುಲೈ 2022, 6:53 IST
ಅಕ್ಷರ ಗಾತ್ರ

ನವದೆಹಲಿ: ಶ್ರೀಲಂಕಾದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಚರ್ಚೆ ಮಾಡಲು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ.

ಈ ಸಭೆಯಲ್ಲಿ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳಿಗೆಶ್ರೀಲಂಕಾ ಬಿಕ್ಕಟ್ಟಿನ ಬಗ್ಗೆ ವಿವರವಾದ ಮಾಹಿತಿ ನೀಡಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಅವರು, ಲಂಕಾದಲ್ಲಿನ ಪರಿಸ್ಥಿತಿ ಮತ್ತು ಭಾರತವು ಈ ಹಿಂದೆ ನೀಡಿದ ನೆರವಿನ ಬಗ್ಗೆ ಮಾಹಿತಿ ನೀಡುವರು ಎಂದು ಜೋಶಿ ತಿಳಿಸಿದ್ದಾರೆ.

ಶ್ರೀಲಂಕಾದಲ್ಲಿನ ಅರಾಜಕತೆಯ ಪರಿಣಾಮ ಅಲ್ಲಿಂದ ತಮಿಳುನಾಡಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ವಲಸೆ ಬರುತ್ತಿದ್ದಾರೆ. ಇದರಿಂದ ತಮಿಳುನಾಡು ರಾಜ್ಯದಲ್ಲಿ ಸಾಕಷ್ಟು ಸಮಸ್ಯೆ ಉಂಟಾಗಲಿದೆ ಎಂದುಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೇಂದ್ರಕ್ಕೆ ಮನವಿ ಮಾಡಿದ್ದರು ಎಂದು ಜೋಶಿ ಹೇಳಿದರು.

ಶ್ರೀಲಂಕಾದಲ್ಲಿ ಹಣದುಬ್ಬರ, ಇಂಧನ ಮತ್ತು ಇತರ ಅಗತ್ಯ ವಸ್ತುಗಳ ಪೂರೈಕೆಯ ತೀವ್ರ ಕೊರತೆಯಿಂದಾಗಿ ಅರಾಜಕತೆ ಉಂಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT