ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಲೈ–ಆಗಸ್ಟ್‌ನಲ್ಲಿ ಕೋವಿಡ್‌ ಲಸಿಕೆ ಪ್ರಕ್ರಿಯೆಗೆ ವೇಗ: ಅಮಿತ್ ಶಾ

Last Updated 21 ಜೂನ್ 2021, 6:34 IST
ಅಕ್ಷರ ಗಾತ್ರ

ಅಹಮದಾಬಾದ್‌: ‘ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ಕೋವಿಡ್‌ ಲಸಿಕೆ ನೀಡಿಕೆ ಪ್ರಕ್ರಿಯೆಯ ವೇಗವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ‘ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದರು.

ಸೋಮವಾರ ಇಲ್ಲಿನ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಉಚಿತ ಕೋವಿಡ್‌ ಲಸಿಕೆ ನೀಡುವ ಪ್ರಧಾನಿಯವರ ನಿರ್ಧಾರದೊಂದಿಗೆ, ಲಸಿಕೆ ಅಭಿಯಾನದ ವೇಗ ಹೆಚ್ಚಿಸುವ ಮೂಲಕ ಪ್ರತಿಯೊಬ್ಬರಿಗೂ ಲಸಿಕೆ ತಲುಪಿಸುವ ಗುರಿಯನ್ನು ಸಾಧಿಸಲಾಗುತ್ತದೆ‘ ಎಂದು ಅವರು ಹೇಳಿದರು.

‘ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಲಸಿಕೆ ನೀಡಿಕೆಯ ಮಹತ್ವದ ಪಯಣ ಆರಂಭವಾಗಿದೆ‘ ಎಂದು ಶಾ ಹೇಳಿದರು.

ದೊಡ್ಡ ಜನಸಂಖ್ಯೆಯನ್ನು ಹೊಂದಿರುವ ಭಾರತದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಉಚಿತ ಲಸಿಕೆ ನೀಡುವುದಾಗಿ ಹೇಳಿರುವ ಪ್ರಧಾನಿ ನರೇಂದ್ರ ಮೋದಿಯವರ ನಿರ್ಧಾರ ಬಹಳ ದೊಡ್ಡದು ಎಂದು ಅವರು ಹೇಳಿದರು.

‘ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ದೇಶದೆಲ್ಲೆಡೆ ಉಚಿತ ಲಸಿಕೆ ನೀಡುವ ಅಭಿಯಾನ ಆರಂಭವಾಗಿದೆ. ಲಸಿಕೆ ನೀಡುವ ಅಭಿಯಾನದಲ್ಲಿ ಭಾರತ ಈಗಾಗಲೇ ಅಗ್ರಸ್ಥಾನದಲ್ಲಿದೆ‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT