ಶಹಜಪುರ: ‘ಅಫ್ಗಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರಲು ಕೇಂದ್ರ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ’ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.

ಕೊರೊನಾ ಪಿಡುಗಿನ ವೇಳೆ ವಿವಿಧ ದೇಶಗಳಲ್ಲಿ ಸಿಲುಕಿದ್ದ ಭಾರತೀಯರನ್ನು ’ವಂದೇ ಭಾರತ್ ಮಿಷನ್’ ಮೂಲಕ ದೇಶಕ್ಕೆ ಕರೆತರಲಾಯಿತು. ಅದೇ ರೀತಿ ಭಾರತೀಯ ವಾಯುಪಡೆ, ಏರ್ ಇಂಡಿಯಾ ಸೇರಿದಂತೆ ಸಾಧ್ಯವಾದ ಎಲ್ಲಾ ಮಾರ್ಗಗಳಿಂದ ಭಾರತೀಯರನ್ನು ಕರೆತರಲಾಗುವುದು’ ಎಂದು ಸಿಂಧಿಯಾ ತಿಳಿಸಿದ್ದಾರೆ.

ಮಧ್ಯಪ್ರದೇಶದ ಶಹಜಪುರದಲ್ಲಿ ‘ಜನ ಆರ್ಶೀವಾದ ಯಾತ್ರೆ’ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಅಫ್ಗಾನಿಸ್ತಾನದಿಂದ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯವನ್ನು ಶುಕ್ರವಾರವೇ ಆರಂಭಿಸಿದೆ. ಈ ಪ್ರಕ್ರಿಯೆ ಮೂರು ದಿನಗಳವರೆಗೆ ಮುಂದುವರಿಯಿತು. ಆದರೆ, ಭಾನುವಾರ, ಕಾಬೂಲ್ ವಿಮಾನ ನಿಲ್ದಾಣದಲ್ಲಿ ಗುಂಡಿನ ಸದ್ದು ಕೇಳಿಸಿದ ಕಾರಣ ವಿಮಾನ ಮಾರ್ಗವನ್ನು ಮುಚ್ಚಲಾಗಿತ್ತು. ಇದರಿಂದಾಗಿ ಸೋಮವಾರ ಸ್ಥಳಾಂತರ ಪ್ರಕ್ರಿಯೆಗೆ ಅಡ್ಡಿ ಉಂಟಾಗಿತ್ತು. ಆದರೆ, ಮಂಗಳವಾರ ವಾಯುಪಡೆಯ ವಿಮಾನದ ಮೂಲಕ ಭಾರತೀಯ ನಾಗರಿಕರನ್ನು ಕರೆತರಲಾಯಿತು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.