ಸೋಮವಾರ, ಅಕ್ಟೋಬರ್ 18, 2021
25 °C

ಶೀಘ್ರದಲ್ಲೇ ಹೊಸ ಸಹಕಾರ ನೀತಿ: ಅಮಿತ್ ಶಾ

ಡೆಕ್ಕನ್ ಹೆರಾಲ್ಡ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಸರ್ಕಾರವು ಶೀಘ್ರದಲ್ಲೇ ಹೊಸ ಸಹಕಾರ ನೀತಿಯನ್ನು ಜಾರಿಗೆ ತರಲಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ ಅವರು ಶನಿವಾರ ಹೇಳಿದ್ದಾರೆ.

ಸಹಕಾರ ಚಳವಳಿ ಬಲಪಡಿಸಲು ಕೇಂದ್ರ ಸರ್ಕಾರವು ರಾಜ್ಯಗಳ ಜೊತೆಗೂಡಿ ಕೆಲಸ ಮಾಡಲಿದೆ ಎಂದೂ ಅವರು ತಿಳಿಸಿದ್ದಾರೆ. ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಹೊಸದಾಗಿ ಸಹಕಾರ ಖಾತೆ ರಚಿಸಲಾಗಿದ್ದು, ಜುಲೈನಲ್ಲಿ ಸಹಕಾರ ಸಚಿವಾಲಯವು ಕಾರ್ಯಾರಂಭ ಮಾಡಿದೆ.

ಮೊದಲ ರಾಷ್ಟ್ರೀಯ ಸಹಕಾರ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಹಕಾರವು ರಾಜ್ಯಗಳ ವಿಷಯ ಆಗಿರುವುದರಿಂದ ಕೇಂದ್ರವು ಈ ಹೊಸ ಸಚಿವಾಲಯವನ್ನು ಏಕೆ ಸೃಷ್ಟಿಸಿದೆ ಎನ್ನುವುದು ಹಲವರಿಗೆ ಅಚ್ಚರಿ ಮೂಡಿಸಿದೆ. ಈ ಕ್ಷೇತ್ರವನ್ನು ಬಲಪಡಿಸಲು ಮತ್ತು ಆಧುನೀಕರಣಗೊಳಿಸುವ ಉದ್ದೇಶದಿಂದ ಸಚಿವಾಲಯವನ್ನು ರೂಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯಗಳೊಂದಿಗೆ ಸಹಕರಿಸಲಾಗುವುದು. ಯಾವುದೇ ಸಂಘರ್ಷ ಇರುವುದಿಲ್ಲ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.

ಸಹಕಾರ ಚಳವಳಿ ಹಿಂದೆಂದಿಗಿಂತಲೂ ಇಂದು ಹೆಚ್ಚು ಪ್ರಸ್ತುತವಾಗಿದೆ ಎಂದು ಹೇಳಿದ ಅವರು, ಸಹಕಾರಿ ಸಂಸ್ಥೆಗಳು ದೇಶದ ಅಭಿವೃದ್ಧಿಯಲ್ಲಿ ಸಾಕಷ್ಟು ಕೊಡುಗೆ ನೀಡಬಲ್ಲವು ಎಂದಿದ್ದಾರೆ.

ತೆರಿಗೆ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ ಸಹಕಾರಿ ಕ್ಷೇತ್ರವು ಎದುರಿಸುತ್ತಿರುವ ಸಮಸ್ಯೆಗಳನ್ನು ಉಲ್ಲೇಖಿಸಿದ ಅವರು, ಸಹಕಾರಿ ಕ್ಷೇತ್ರಕ್ಕೆ ಯಾವುದೇ ಅನ್ಯಾಯ ಆಗುವುದಿಲ್ಲ ಎನ್ನುವ ಭರವಸೆ ನೀಡಿದ್ದಾರೆ.

ಓದಿ: 

ಕೃಷಿ ಸಹಕಾರಿ ಸಂಘಗಳ ಡಿಜಿಟಲೀಕರಣ: ಡಿಜಿಟಲ್‌ ವ್ಯವಸ್ಥೆಯ ಮುಲಕ ಸಾಲ ನೀಡಲು ಅನುಕೂಲ ಆಗುವಂತೆ 98 ಸಾವಿರ ಪ್ರಾಥಮಿಕ ಕೃಷಿ ಸಹಕಾರ ಸಂಘಗಳನ್ನು ಡಿಜಿಟಲೀಕರಣ ಮತ್ತು ಆಧುನೀಕರಣಗೊಳಿಸುವ ಕಡೆಗೆ ಕೇಂದ್ರವು ಗಮನ ಹರಿಸಲಿದೆ ಎಂದು ಸಹಕಾರ ಸಚಿವಾಲಯದ ಕಾರ್ಯದರ್ಶಿ ದೇವೇಂದ್ರ ಕುಮಾರ್‌ ಸಿಂಗ್‌ ಹೇಳಿದ್ದಾರೆ.

ಸಹಕಾರ ಚಳವಳಿ ಮತ್ತು ಸಹಕಾರಿ ಸಂಸ್ಥೆಗಳಿಂದ ತಯಾರಾದ ಗುಣಮಟ್ಟದ ಉತ್ಪನ್ನಗಳನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಜನಪ್ರಿಯಗೊಳಿಸಲು ಕೇಂದ್ರ ಸರ್ಕಾರವು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು