ಸತ್ಯ ನುಡಿಯುವವರ ವಿರುದ್ಧ ಕೇಂದ್ರ ತನಿಖಾ ಏಜೆನ್ಸಿ ಬಳಕೆ: ಮಮತಾ ಬ್ಯಾನರ್ಜಿ

ನವದೆಹಲಿ: ಸತ್ಯವನ್ನು ನುಡಿಯುವವರ ವಿರುದ್ಧ ಕೇಂದ್ರ ಸರ್ಕಾರವು ತನಿಖಾ ಏಜೆನ್ಸಿಗಳನ್ನು ಬಳಕೆ ಮಾಡುತ್ತಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಆರೋಪಿಸಿದ್ದಾರೆ.
ಶಿವಸೇನಾ ಸಂಸದ ಸಂಜಯ್ ರಾವುತ್‌ಗೆ ಜಾರಿ ನಿರ್ದೇಶನಾಯಲವು (ಇ.ಡಿ) ಸೋಮವಾರ ಸಮನ್ಸ್ ಜಾರಿ ಮಾಡಿದೆ. ಇದರ ವಿರುದ್ಧ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಧ್ವನಿ ಎತ್ತಿದ್ದಾರೆ.
ಇದನ್ನೂ ಓದಿ: ಉದ್ಧವ್ ಠಾಕ್ರೆ ಪರ ಕೇವಲ 15 ಶಾಸಕರು, ನಾಲ್ವರು ಸಚಿವರು
ಸತ್ಯ ನುಡಿಯುವ ಜನ ಸಾಮಾನ್ಯರ ಮೇಲೆ ಬಿಜೆಪಿ, ಸಿಬಿಐ, ಇ.ಡಿ.ಗಳಂತಹ ಏಜೆನ್ಸಿಗಳನ್ನು ಬಳಕೆ ಮಾಡಿ ಹಿಂಸಿಸುತ್ತಿದೆ. ಇದರಿಂದಾಗಿ ಉದ್ಯಮಿಗಳು ಸೇರಿದಂತೆ ಲಕ್ಷಾಂತರ ಜನರು ದೇಶವನ್ನು ತೊರೆದಿದ್ದಾರೆ ಎಂದು ಹೇಳಿದ್ದಾರೆ.
ಪತ್ರಾ ಚಾಲ್ ಭೂ ಹಗರಣ ಪ್ರಕರಣದ ಸಂಬಂಧ ಜೂನ್ 28ರಂದು ವಿಚಾರಣೆಗೆ ಹಾಜರಾಗುವಂತೆ ಶಿವಸೇನಾ ನಾಯಕ ಸಂಜಯ್ ರಾವುತ್‌ಗೆ ಇ.ಡಿ ಸಮನ್ಸ್ ಜಾರಿ ಮಾಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.