ಮಂಗಳವಾರ, ಅಕ್ಟೋಬರ್ 20, 2020
22 °C

ಲಡಾಖ್ ಸಂಘರ್ಷ: ಭಾರತದ ಒಂದಿಂಚು ಭೂಮಿಯನ್ನೂ ಯಾರೂ ವಶಪಡಿಸಲಾರರು ಎಂದ ಅಮಿತ್ ಶಾ

ಪಿಟಿಐ Updated:

ಅಕ್ಷರ ಗಾತ್ರ : | |

Amit shah

ನವದೆಹಲಿ: ‘ದೇಶದ ಪ್ರತಿ ಇಂಚು ಭೂಮಿಗೆ ಭದ್ರತೆ ಒದಗಿಸುವ ವಿಚಾರದಲ್ಲಿ ಮೋದಿ ಸರ್ಕಾರ ಸಂಪೂರ್ಣ ಎಚ್ಚರದಿಂದ ಇದೆ. ಯಾರಿಂದಲೂ ದೇಶದ ಭೂಮಿ ವಶಪಡಿಸಿಕೊಳ್ಳಲಾಗದು’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಲಡಾಖ್‌ ಗಡಿ ಪ್ರದೇಶದಲ್ಲಿ ಚೀನಾದೊಂದಿಗೆ ಸಂಘರ್ಷದ ಪರಿಸ್ಥಿತಿ ಮುಂದುವರಿದಿರುವ ಸಂದರ್ಭದಲ್ಲೇ ಶಾ ಈ ಹೇಳಿಕೆ ನೀಡಿದ್ದಾರೆ.

‘ಲಡಾಖ್‌ನಲ್ಲಿ ಚೀನಾದೊಂದಿಗಿನ ಮುಖಾಮುಖಿ ಕೊನೆಗೊಳಿಸುವ ಸಲುವಾಗಿ ಸೇನಾ ಮಟ್ಟದಲ್ಲಿ ಹಾಗೂ ರಾಜತಾಂತ್ರಿಕ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ. ನಮ್ಮ ದೇಶದ ಪ್ರತಿ ಇಂಚು ಭೂಮಿಯ ಮೇಲೂ ನಿಗಾ ಇರಿಸಿದ್ದೇವೆ. ದೇಶದ ಗಡಿ ಹಾಗೂ ಸಾರ್ವಭೌಮತ್ವವನ್ನು ರಕ್ಷಿಸಿಕೊಳ್ಳುವಲ್ಲಿ ನಮ್ಮ ರಕ್ಷಣಾ ಪಡೆಗಳು ಮತ್ತು ನಾಯಕತ್ವ ಸಮರ್ಥವಾಗಿದೆ’ ಎಂದು ಅವರು ಹೇಳಿದ್ದಾರೆ.

ಬಿಹಾರದಲ್ಲಿ ಎನ್‌ಡಿಎಗೆ ಬಹುಮತ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಮೂರನೇ ಎರಡರಷ್ಟು ಬಹುಮತ ದೊರೆಯಲಿದೆ ಎಂದು ಶಾ ಭರವಸೆ ವ್ಯಕ್ತಪಡಿಸಿದ್ದಾರೆ. ನಿತೀಶ್ ಕುಮಾರ್ ಅವರು ಬಿಹಾರದ ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಅಧಿಕಾರ ಸ್ವೀಕರಿಸಲಿದ್ದಾರೆ ಎಂದೂ ಅವರು ಹೇಳಿದ್ದಾರೆ.

ಲೋಕ ಜನಶಕ್ತಿ ಪಕ್ಷಕ್ಕೆ (ಎಲ್‌ಜೆಪಿ) ಸಾಕಷ್ಟು ಸ್ಥಾನ ನೀಡುವ ಭರವಸೆ ನೀಡಲಾಗಿತ್ತು. ಆದರೂ ಪಕ್ಷವು ಮೈತ್ರಿಕೂಟದಿಂದ ಹೊರನಡೆಯಿತು. ಅದು ಎಲ್‌ಜೆಪಿ ನಿರ್ಧಾರವೇ ಹೊರತು ನಮ್ಮದಲ್ಲ ಎಂದೂ ಶಾ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು