ಗುರುವಾರ , ಡಿಸೆಂಬರ್ 2, 2021
19 °C
ನಿರಂತರ ಜಾಗರೂಕತೆ ಅಗತ್ಯ: ರಾಜೇಶ್ ಭೂಷಣ್‌

ಕೋವಿಡ್ ಪರೀಕ್ಷಾ ಸಂಖ್ಯೆ ಇಳಿಕೆ: ಕೇಂದ್ರದ ಕಳವಳ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬೇರೆ ಬೇರೆ ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಸಚಿವಾಲಯವು, ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಸೋಂಕು ಪತ್ತೆ ಪರೀಕ್ಷೆಗಳನ್ನು ಕಡಿಮೆ ಮಾಡಿರುವುದಕ್ಕೆ ಕಳವಳ ವ್ಯಕ್ತಪಡಿಸಿದೆ.

ವಿವಾಹ ಸಮಾರಂಭಗಳು, ಹಬ್ಬಗಳು ಮತ್ತು ರಜಾದಿನಗಳಲ್ಲಿನ ಪ್ರಯಾಣದ ವಿವರಗಳನ್ನು ಗಮನದಲ್ಲಿಟ್ಟುಕೊಂಡು ಕೋವಿಡ್ ಪರೀಕ್ಷಾ ಸಂಖ್ಯೆಗಳನ್ನು ಹೆಚ್ಚಿಸುವಂತೆ ಕೇರಳ, ಮಹಾರಾಷ್ಟ್ರ, ಗೋವಾ ಸೇರಿದಂತೆ ವಿವಿಧ ರಾಜ್ಯಗಳಿಗೆ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ.

‘ಪರೀಕ್ಷಾ ಸಂಖ್ಯೆ ಇಳಿಕೆಯಾಗುತ್ತಿರುವುದರಿಂದ ಸೋಂಕಿನ ಹರಡುವಿಕೆಯನ್ನು ನಿರ್ಧರಿಸುವುದು ಕಷ್ಟವಾಗುತ್ತದೆ. ಅಭಿವೃದ್ಧಿ ಹೊಂದಿರುವ ಕೆಲವು ದೇಶಗಳು ಕೋವಿಡ್‌ನ ನಾಲ್ಕನೇ ಮತ್ತು  ಐದನೇ ಅಲೆಯನ್ನು ಎದುರಿಸುತ್ತಿವೆ. ಸಾಂಕ್ರಾಮಿಕ ರೋಗದ ಈ ಅನಿರೀಕ್ಷಿತ ಮತ್ತು ಸಾಂಕ್ರಾಮಿಕ ಸ್ವರೂಪವನ್ನು ಗಮನಿಸಿದರೆ ನಿರಂತರ ಜಾಗರೂಕತೆಯ ಅವಶ್ಯಕತೆ ಇದೆ’ ಎಂದು ಅವರು ಪತ್ರದಲ್ಲಿ ಒತ್ತಿ ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು