ಭಾನುವಾರ, ನವೆಂಬರ್ 28, 2021
20 °C

ಗಡಿ ರಾಜ್ಯಗಳ ಒಳಿತಿಗಾಗಿಯೇ ಬಿಎಸ್‌ಎಫ್ ಕಾರ್ಯಾಚರಣೆ ವ್ಯಾಪ್ತಿ ವಿಸ್ತರಣೆ: ಬಿಜೆಪಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಗಡಿ ರಾಜ್ಯಗಳ, ಅದರಲ್ಲೂ ಪಂಜಾಬ್‌ನ ಒಳಿತಿಗಾಗಿಯೇ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಕಾರ್ಯಾಚರಣೆಯ ವ್ಯಾಪ್ತಿ ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಪಿ ಹೇಳಿದೆ.

ಪಂಜಾಬ್‌ನಲ್ಲಿ ಡ್ರಗ್ಸ್, ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಮೇಲೆ ನಿಗಾ ಇರಿಸಲು ಕೇಂದ್ರದ ನಿರ್ಧಾರದಿಂದ ನೆರವಾಗಲಿದೆ ಎಂದು ಬಿಜೆಪಿ ಸಮರ್ಥಿಸಿದೆ.

ಓದಿ: 

ಪಂಜಾಬ್‌ನಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಕೇಂದ್ರ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ.

‘ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅಂತರರಾಷ್ಟ್ರೀಯ ಗಡಿಯ 50 ಕಿಲೋಮೀಟರ್ ವ್ಯಾಪ್ತಿಯಲ್ಲಿ ಶೋಧ ಕಾರ್ಯ, ಜಪ್ತಿ ಮತ್ತು ಬಂಧಿಸಲು ಅವಕಾಶ ನೀಡಿ ಬಿಎಸ್‌ಎಫ್‌ಗೆ ಅಧಿಕಾರ ನೀಡಲಾಗಿದೆ. ಇದರಿಂದ ಡ್ರಗ್ಸ್, ಶಸ್ತ್ರಾಸ್ತ್ರ ಮತ್ತು ಗೋವುಗಳ ಕಳ್ಳಸಾಗಾಣಿಕೆ ತಡೆಯಲು ಸಾಧ್ಯ’ ಎಂದು ಬಿಜೆಪಿ ನಾಯಕ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಪಂಜಾಬ್, ಪಶ್ಚಿಮ ಬಂಗಾಳ, ಅಸ್ಸಾಂನ ಅಂತರರಾಷ್ಟ್ರೀಯ ಗಡಿ ಪ್ರದೇಶಗಳಲ್ಲಿ 15 ಕಿಲೋಮೀಟರ್ ಬದಲಿಗೆ 50 ಕಿಲೋಮೀಟರ್ ವ್ಯಾಪ್ತಿಯಲ್ಲಿ ಶೋಧ ಕಾರ್ಯಾಚರಣೆ, ಜಪ್ತಿ ಹಾಗೂ ಬಂಧನಕ್ಕೆ ಅವಕಾಶ ಕಲ್ಪಿಸಿ ಕೇಂದ್ರ ಸರ್ಕಾರ ಬಿಎಸ್‌ಎಫ್ ಕಾಯ್ದೆಗೆ ತಿದ್ದುಪಡಿ ತಂದಿದೆ.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು