ಭಾನುವಾರ, ಅಕ್ಟೋಬರ್ 24, 2021
23 °C

ಬಿಜೆಪಿಯ ಒಬಿಸಿ ರಾಜಕೀಯ ಬಹಿರಂಗ: ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಹಿಂದುಳಿದ ವರ್ಗಗಳ ಜಾತಿ ಗಣತಿ ನಡೆಸಲು ನಿರಾಕರಿಸಿರುವ ಕೇಂದ್ರ ಸರ್ಕಾರದ ಧೋರಣೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಹುಜನ ಸಮಾಜವಾದಿ ಪಕ್ಷದ (ಬಿಎಸ್‌ಪಿ) ಅಧ್ಯಕ್ಷೆ ಮಾಯಾವತಿ, ‘ಬಿಜೆಪಿ ಚುನಾವಣಾ ಹಿತಾಸಕ್ತಿಗಾಗಿ ಮಾತ್ರ ಈ ಸಮುದಾಯವನ್ನು ಬಳಸಿಕೊಳ್ಳುತ್ತಿರುವುದನ್ನು ಇದು ಬಹಿರಂಗಪಡಿಸಿದೆ‘ ಎಂದು ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಜಾತಿ ಗಣತಿ ನಡೆಸಲು ‘ಆಡಳಿತಾತ್ಮಕವಾಗಿ ಕಷ್ಟಕರ ಮತ್ತು ತೊಡಕಿನ ಕೆಲಸ. ಅಲ್ಲದೇ ಇಂಥ ಮಾಹಿತಿಯನ್ನು ಗಣತಿ ವ್ಯಾಪ್ತಿಯಿಂದ ಹೊರಗಿಟ್ಟಿರುವುದು ಪ್ರಜ್ಞಾಪೂರ್ವಕ ನಿರ್ಧಾರ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಮಾಯಾವತಿ ಈ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಬಿಎಸ್‌ಪಿ ನಾಯಕಿ, ‘ಕೇಂದ್ರ ಸರ್ಕಾರವು ಹಿಂದುಳಿದ ವರ್ಗಗಳ ಜಾತಿ ಗಣತಿಯನ್ನು ನಡೆಸಲು ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸುವ ಮೂಲಕ, ಬಿಜೆಪಿ ತನ್ನ ಚುನಾವಣಾ ಹಿತಾಸಕ್ತಿಗಾಗಿ ಒಬಿಸಿಯನ್ನು ಹೇಗೆ ಬಳಸಿಕೊಳ್ಳುತ್ತದೆ ಎಂಬುದನ್ನು ಬಹಿರಂಗಪಡಿಸಿದೆ. ಇದು ತೀವ್ರ ಕಳವಳಕಾರಿ ವಿಷಯ. ಇದರಿಂದ ಬಿಜೆಪಿಯ ಮಾತು ಮತ್ತು ಕೃತಿ ನಡುವೆ ಎಷ್ಟು ವ್ಯತ್ಯಾಸವಿದೆ ಎಂಬುದು ಗೊತ್ತಾಗುತ್ತದೆ‘ ಎಂದು ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಜಾತಿ ಗಣತಿ ನಡೆಸುವುದನ್ನು ನಿರಾಕರಿಸುವ ಮೂಲಕ ಕೇಂದ್ರ ಸರ್ಕಾರ ಸಮುದಾಯಕ್ಕೆ ನೋವುಂಟು ಮಾಡಿದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು