ಸೋಮವಾರ, ಜುಲೈ 26, 2021
24 °C
ಕಣ್ಗಾವಲು ವಿಚಾರ: ಮುಂದುವರಿದ ಜಟಾಪಟಿ

ಪೆಗಾಸಸ್: ಹಲವೆಡೆ ಕಾಂಗ್ರೆಸ್ ಪ್ರತಿಭಟನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪೆಗಾಸಸ್ ಗೂಢಚರ್ಯೆಯನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಕಾರ್ಯಕರ್ತರು ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆಯಾ ರಾಜ್ಯದ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.

ಛತ್ತೀಸಗಡ, ಮಹಾರಾಷ್ಟ್ರ, ತೆಲಂಗಾಣ, ತಮಿಳುನಾಡು, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ರಾಜಸ್ಥಾನ, ಪಂಜಾಬ್ ಪ್ರದೇಶ ಕಾಂಗ್ರೆಸ್‌ ಸಮಿತಿ ಸದಸ್ಯರು ಆಯಾ ರಾಜ್ಯಗಳ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸಿ ದ್ದಾರೆ. ನಂತರ ರಾಜಭವನಕ್ಕೆ ತೆರಳಿ, ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಉತ್ತರಾಖಂಡ ರಾಜಭವನಕ್ಕೆ ಮೆರವ ಣಿಗೆ ಹೊರಡಲು ಮುಂದಾದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದ್ದಾರೆ.

ರಾಜಕೀಯ ಕಾರಣಗಳಿಗಾಗಿ ಗೂಢಚರ್ಯೆ ನಡೆಸಲು ಅವಕಾಶ ನೀಡಿದ್ದರ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ತಮಿಳುನಾಡು ಕಾಂಗ್ರೆಸ್ ಸದಸ್ಯರು ಆಗ್ರಹಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಪೆಗಾಸಸ್ ಗೂಢಚರ್ಯೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಟೀಕೆಯನ್ನು ಮುಂದುವರಿಸಿದ್ದಾರೆ.

ನಿರಾಕರಣೆ: ಪೆಗಾಸಸ್ ವರದಿಗಳಿಗೆ ಯಾವುದೇ ಆಧಾರ ಇಲ್ಲ. ಇದು ಕಟ್ಟುಕತೆ ಎಂದು ಬಿಜೆಪಿ ಹೇಳಿದೆ.

***

ನಮ್ಮ ವಿರುದ್ಧ ಗೂಢಚರ್ಯೆ ನಡೆಸಿದರೂ, ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ನಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ. ಗೂಢಚರ್ಯೆಗೆ ಹೆದರುವುದಿಲ್ಲ

– ಅಖಿಲ ಅಸ್ಸಾಂ ವಿದ್ಯಾರ್ಥಿ ಒಕ್ಕೂಟ

ಕೆಲ ಪತ್ರಕರ್ತರ ಮೊಬೈಲ್ ಸಂಖ್ಯೆಯನ್ನು ಎಲ್ಲೋ ಪೇಜಸ್‌ನಿಂದ ತೆಗೆದುಕೊಂಡು ಈ ವರದಿ ಸಿದ್ಧಪಡಿಸಲಾಗಿದೆ. ಇದು ಕಪೋಲಕಲ್ಪಿತ ಕಟ್ಟುಕತೆ

– ಮೀನಾಕ್ಷಿ ಲೇಖಿ, ಕೇಂದ್ರ ಸಚಿವೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು