ಕೋವಿಡ್ ಮೂರನೇ ಅಲೆ ಎದುರಿಸಲು ‘ಸಮರೋಪಾದಿಯ ಸಿದ್ಧತೆ‘: ಕೇಜ್ರಿವಾಲ್

ನವದೆಹಲಿ: ‘ಕೋವಿಡ್–19’ ಪಿಡುಗಿನ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ಎಚ್ಚರಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಈ ಅಲೆಯಿಂದ ಉಂಟಾಗುವ ಪರಿಣಾಮವನ್ನು ಎದುರಿಸಲು ನಮ್ಮ ಸರ್ಕಾರ ಸಮರೋಪಾದಿಯಲ್ಲಿ ಸಿದ್ಧತೆ ನಡೆಸುತ್ತಿದೆ ಎಂದು ಶನಿವಾರ ಹೇಳಿದ್ದಾರೆ.
ಆನ್‌ಲೈನ್ ಮೂಲಕ ದೆಹಲಿಯ ಒಂಬತ್ತು ಆಸ್ಪತ್ರೆಗಳಲ್ಲಿ 22 ಹೊಸ ಪಿಎಸ್‌ಎ ಆಮ್ಲಜನಕ ಉತ್ಪಾದಕ ಘಟಕಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮೂರನೇ ಅಲೆಯ ಬಗ್ಗೆ ಬ್ರಿಟನ್‌ನಿಂದ ಆತಂಕಕಾರಿ ಸೂಚನೆಗಳು ಬರುತ್ತಿವೆ. ಆ ದೇಶದಲ್ಲಿ ಶೇ 45 ರಷ್ಟು ಲಸಿಕೆ ನೀಡುವ ಪ್ರಕ್ರಿಯೆ ಪೂರ್ಣಗೊಂಡಿದ್ದರೂ, ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಆದ್ದರಿಂದ, ನಾವು ಈ ಸಮಯದಲ್ಲಿ ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ‘ ಎಂದು ಅವರು ಹೇಳಿದರು.
‘ಕೋವಿಡ್‌ನ ಮೂರನೇ ಅಲೆ ಬಾರದಿರಲಿ ಎಂದು ನಾವು ಪ್ರಾರ್ಥಿಸುತ್ತೇವೆ. ಆದರೆ ಅದು ಸಂಭವಿಸಿದಲ್ಲಿ, ದೆಹಲಿಯ ನಾಗರಿಕರು ಮತ್ತೆ ಒಗ್ಗಟ್ಟಾಗಿ ಹೋರಾಡಬೇಕಿದೆ‘ ಎಂದು ಅವರು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.