ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂಡೀಗಡ: ಸೋಂಕು ಪ್ರಕರಣ ಏರಿಕೆ, ರಾತ್ರಿ 10ರಿಂದ ಮುಂಜಾನೆ 5ರವರೆಗೆ ಕರ್ಫ್ಯೂ

Last Updated 6 ಏಪ್ರಿಲ್ 2021, 14:44 IST
ಅಕ್ಷರ ಗಾತ್ರ

ಚಂಡೀಗಡ: ನಗರದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚಂಡೀಗಡ ಆಡಳಿತ ಮಂಗಳವಾರ ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲು ನಿರ್ಧರಿಸಿದೆ.
ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ ನಂತರ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ವಕ್ತಾರರು ತಿಳಿಸಿದ್ದಾರೆ.

ನಗರವು ಸೋಂಕುಗಳ ಸಂಖ್ಯೆಯಲ್ಲಿ ಹೆಚ್ಚಳಕ್ಕೆ ಸಾಕ್ಷಿಯಾಗಿದೆ. ಏಪ್ರಿಲ್ 4 ರಂದು ಚಂಡೀಗಡದಲ್ಲಿ 341 ಪ್ರಕರಣಗಳು ವರದಿಯಾಗಿದ್ದು, ಈ ವರ್ಷದಲ್ಲಿ ದಾಖಲಾದ ಅತಿ ಹೆಚ್ಚಿನ ಪ್ರಕರಣಗಳಾಗಿವೆ.

ಚಂಡೀಗಡ ಆಡಳಿತಾಧಿಕಾರಿ ವಿ.ಪಿ. ಸಿಂಗ್ ಬಂದೋರ್ ಅವರು ರಾತ್ರಿ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು ಮತ್ತು ಎಲ್ಲಾ ಆರೋಗ್ಯ ಕಾರ್ಯಕರ್ತರು ಬೇಗನೆ ಲಸಿಕೆ ಪಡೆಯುವುದನ್ನು ಖಚಿತಪಡಿಸಿಕೊಳ್ಳುವಂತೆ ಆಸ್ಪತ್ರೆ ಅಧಿಕಾರಿಗಳಿಗೆ ತಿಳಿಸಿದರು.

ಜನರು ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸದಿದ್ದರೆ ವಾರಾಂತ್ಯದ ಕರ್ಫ್ಯೂ, 'ಅಪ್ನಿ ಮಂಡಿಸ್' (ಮಾರುಕಟ್ಟೆ) ಮುಚ್ಚಲಾಗುವುದು ಮತ್ತು ಇತರ ಜನದಟ್ಟಣೆ ಇರುವ ಸ್ಥಳಗಳಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಬಂದೋರ್ ಹೇಳಿದರು.

'ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿನ ತ್ವರಿತ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು, ಪ್ರತಿದಿನ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿಗೊಳಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ'. ಈ ಅವಧಿಯಲ್ಲಿ ಸಭೆಗಳು, ಪಕ್ಷಗಳು, ಅನಿವಾರ್ಯವಲ್ಲದ ಚಟುವಟಿಕೆಗಳನ್ನು ನಡೆಸುವುದಕ್ಕೆ ಅವಕಾಶ ನೀಡಲಾಗುವುದಿಲ್ಲ' ಎಂದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ರಾತ್ರಿ 10ರೊಳಗೆ ರೆಸ್ಟೋರೆಂಟ್‌ಗಳನ್ನು ಸಹ ಮುಚ್ಚುವ ಅಗತ್ಯವಿದೆ. ಪರಿಸ್ಥಿತಿ ಸುಧಾರಿಸಿದಾಗ ರಾತ್ರಿ ಕರ್ಫ್ಯೂವನ್ನು ಪರಿಶೀಲಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT