ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಕ್ಷೇಪಾರ್ಹ ವಿಡಿಯೊ ವೈರಲ್ ವದಂತಿ: ಸೆ.24ರ ವರೆಗೆ ರಜೆ ಘೋಷಿಸಿದ ಚಂಡೀಗಡ ವಿವಿ

Last Updated 19 ಸೆಪ್ಟೆಂಬರ್ 2022, 5:36 IST
ಅಕ್ಷರ ಗಾತ್ರ

ಚಂಡೀಗಡ:ಹಾಸ್ಟೆಲ್‌ನಲ್ಲಿ ಹಲವು ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೊಗಳನ್ನು ಚಿತ್ರೀಕರಿಸಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ನ ಮೊಹಾಲಿಯ ಚಂಡೀಗಡವಿಶ್ವವಿದ್ಯಾಲಯವೊಂದರಲ್ಲಿ ಭಾರಿ ಪ್ರತಿಭಟನೆ ನಡೆದಿದೆ. ಈ ಹಿನ್ನೆಲೆಯಲ್ಲಿವಿಶ್ವವಿದ್ಯಾಲಯವು ಸೆಪ್ಟೆಂಬರ್‌ 24ರ ವರೆಗೆ ರಜೆ ಘೋಷಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಮೂವರನ್ನು ಬಂಧಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಾಸ್ಟೆಲ್‌ನಲ್ಲಿ 4,000ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಇದ್ದಾರೆ.ವಿವಿಯಲ್ಲಿಪ್ರತಿಭಟನೆಗಳು ನಡೆದ ಬೆನ್ನಲ್ಲೇ ಹಲವರು ಮನೆಗಳಿಗೆ ತೆರಳಿದ್ದಾರೆ.

'ಆಕ್ಷೇಪಾರ್ಹ ವಿಡಿಯೊಗಳನ್ನು ಚಿತ್ರೀಕರಿಸಲಾಗಿದೆ ಎಂಬುದು ವದಂತಿ'
ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬರು ಇತರರಆಕ್ಷೇಪಾರ್ಹ ವಿಡಿಯೊಗಳನ್ನು ಚಿತ್ರೀಕರಿಸಿ ತನ್ನ ಗೆಳೆಯರಿಗೆ ಕಳುಹಿಸಿದ್ದರು ಎಂಬುದು ವದಂತಿ.ಒಬ್ಬ ವಿದ್ಯಾರ್ಥಿನಿಯು ತನ್ನ ವಿಡಿಯೊವನ್ನು ಯುವಕನೊಬ್ಬನ ಜೊತೆ ಹಂಚಿಕೊಂಡಂತೆ ಕಾಣಿಸುತ್ತಿದೆ. ಇತರ ಯಾವುದೇ ವಿದ್ಯಾರ್ಥಿನಿಯ ಆಕ್ಷೇಪಾರ್ಹವಾದ ವಿಡಿಯೊ ಸಿಕ್ಕಿಲ್ಲ ಎಂದು ಪಂಜಾಬ್‌ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕಿ ಗುರ್‌ಪ್ರೀತ್‌ ಕೌರ್‌ ಹೇಳಿದ್ದಾರೆ.

ಹಾಸ್ಟೆಲ್‌ನಲ್ಲಿ ಏನು ನಡೆದಿದೆ ಎಂಬುದರ ಬಗ್ಗೆ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ.ಆರೋಪಿ ವಿದ್ಯಾರ್ಥಿನಿಯು ಹಾಸ್ಟೆಲ್‌ನ ಶೌಚಾಲಯದಲ್ಲಿ ಮೊಬೈಲ್‌ ಬಳಸಿ ಫೋಟೊ ತೆಗೆಯುವುದನ್ನು ಮೂರ್ನಾಲ್ಕು ವಿದ್ಯಾರ್ಥಿನಿಯರು ಗಮನಿಸಿದ್ದಾರೆ. ಆರೋಪಿಯು ಶೌಚಾಲಯದ ಬಾಗಿಲಿನ ಕೆಳಗಿನಿಂದ ವಿಡಿಯೊ ಚಿತ್ರೀಕರಿಸಿದ್ದಾರೆ ಎಂದು ಈ ಮೂರ್ನಾಲ್ಕು ವಿದ್ಯಾರ್ಥಿನಿಯರು ಭಾವಿಸಿದ್ದಾರೆ. ಬಳಿಕ, ಅವರು ಹಾಸ್ಟೆಲ್‌ ವಾರ್ಡನ್‌ಗೆ ವಿಷಯ ತಿಳಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆಎಂದು ಗುರ್‌ಪ್ರೀತ್‌ತಿಳಿಸಿದ್ದಾರೆ.

‘ವಿದ್ಯಾರ್ಥಿನಿಯರ ಕಳವಳವನ್ನು ಪರಿಹರಿಸಲಾಗಿದೆ. ಇತರ ವಿದ್ಯಾರ್ಥಿನಿಯರ ವಿಡಿಯೊಗಳು ಆರೋಪಿಯ ಮೊಬೈಲ್‌ನಲ್ಲಿ ಇವೆಯೇ ಎಂಬುದು ಅವರ ಕಳವಳವಾಗಿತ್ತು. ಆದರೆ, ಬೇರೆ ವಿದ್ಯಾರ್ಥಿನಿಯರ ವಿಡಿಯೊ ಆರೋಪಿಯ ಮೊಬೈಲ್‌ನಲ್ಲಿ ಸಿಕ್ಕಿಲ್ಲ’ ಎಂದೂಮಾಹಿತಿ ನೀಡಿದ್ದಾರೆ.

ಹಾಸ್ಟೆಲ್‌ನಲ್ಲಿ ಇರುವ ಹಲವು ವಿದ್ಯಾರ್ಥಿನಿಯರ ವಿಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಲಾಗಿದೆ ಎಂಬುದು ಸುಳ್ಳು ಮತ್ತು ಆಧಾರರಹಿತ. ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬುದೂ ಸುಳ್ಳು ಎಂದು ವಿಶ್ವವಿದ್ಯಾಲಯ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT