ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಂದಿನಿ ಚೌಕ್, ಮಜ್ನು ಕಾ ತಿಲಾ ಫುಡ್‌ ಪಾರ್ಕ್‌ ಆಗಿ ಅಭಿವೃದ್ಧಿ: ಕೇಜ್ರಿವಾಲ್

Last Updated 24 ಜುಲೈ 2022, 10:32 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯನ್ನು ಆಹಾರ ರಾಜಧಾನಿಯನ್ನಾಗಿಸುವ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ಮೊದಲ ಹಂತದಲ್ಲಿ ಚಾಂದಿನಿ ಚೌಕ್‌ ಮತ್ತು ಮಜ್ನು ಕಾ ತಿಲಾವನ್ನು ಫುಡ್‌ ಪಾರ್ಕ್‌ ಆಗಿ ಅಭಿವೃದ್ಧಿಪಡಿಸಲು ಗುರುತಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಭಾನುವಾರ ತಿಳಿಸಿದ್ದಾರೆ.

ಆನ್‌ಲೈನ್‌ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ‘ವೈವಿಧ್ಯಮಯ ಆಹಾರ ಪದಾರ್ಥಗಳು ಲಭ್ಯವಿರುವ ಹಲವು ಹಬ್‌ಗಳು ದೆಹಲಿಯಲ್ಲಿವೆ. ಕೆಲ ಹಬ್‌ಗಳು ಎಲ್ಲಾ ವಿಧದ ಆಹಾರಪದಾರ್ಥಗಳನ್ನು ಒದಗಿಸುತ್ತವೆ. ಹಾಗಾಗಿ ಯೋಜನೆಯ ಮೊದಲ ಹಂತದಲ್ಲಿ ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಮಜ್ನು ಕಾ ತಿಲಾ ಮತ್ತು ಚಾಂದಿನಿ ಚೌಕ್ ಅನ್ನು ಆಹಾರ ಹಬ್‌ ಆಗಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT