ಬುಧವಾರ, ಜುಲೈ 6, 2022
21 °C

ಕಾಂಗ್ರೆಸ್‌ ನಾಯಕತ್ವ ಬದಲಾವಣೆ ಮತ್ತೆ ಮುನ್ನೆಲೆಗೆ: ಅನಿವಾರ್ಯ ಎಂದ ಶಶಿ ತರೂರ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಪಂಚರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್‌ ತೀವ್ರ ಹಿನ್ನಡೆ ಅನುಭವಿಸಿದೆ. ಇದರ ಬೆನ್ನಲ್ಲೇ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 

ನಾಯಕತ್ವ ಬದಲಾವಣೆ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಸಂಸದ ಶಶಿ ತರೂರ್‌, ‘ಮುಂಬರುವ ಚುನಾವಣೆಗಳಲ್ಲಿ ಪಕ್ಷಕ್ಕೆ ಗೆಲುವು ಸಿಗಬೇಕು. ಜನರ ವಿಶ್ವಾಸ ಗಳಿಸಬೇಕು ಎಂದಾದಲ್ಲಿ ಪಕ್ಷದ ಸಂಘಟನೆ ಹಾಗೂ ನಾಯಕತ್ವ ಬಲಗೊಳ್ಳುವುದು ಅಗತ್ಯ ಹಾಗೂ ಅನಿವಾರ್ಯ’ ಎಂದು ಹೇಳಿದ್ದಾರೆ.

‘ಕಾಂಗ್ರೆಸ್‌ ನಂಬಿದ ಭಾರತವನ್ನು ಕಟ್ಟಬೇಕು. ಆದರೆ, ಕಾಂಗ್ರೆಸ್‌ನ ಶಕ್ತಿಯಲ್ಲಿ ನಂಬಿಕೆ ಹೊಂದಿರುವ ನಮಗೆ ಈ ಚುನಾವಣೆಯ ಫಲಿತಾಂಶದಿಂದ ನೋವಾಗಿದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಓದಿ...  ಬಿಜೆಪಿ, ಎಎಪಿಗೆ ಅಭಿನಂದನೆ: ವ್ಯವಸ್ಥೆ ಬದಲಾಗಬೇಕು ಎಂದ ಟಬು ರಾವ್‌ 

ಓದಿ... 

 ಪಂಚರಾಜ್ಯ ಚುನಾವಣೆ ಫಲಿತಾಂಶ: ಬಿಜೆಪಿ ಜಯಭೇರಿ– ಎಎಪಿಗೆ ಗರಿ

 ಪಂಚರಾಜ್ಯ ಚುನಾವಣೆ ಫಲಿತಾಂಶ: ಬಿಜೆಪಿಗೆ ಹುಮ್ಮಸ್ಸು, ಕಾಂಗ್ರೆಸ್‌ಗೆ ಪಾಠ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು