ಶನಿವಾರ, ಅಕ್ಟೋಬರ್ 16, 2021
22 °C
ಮಹಿಳೆ ಅಧ್ಯಕ್ಷೆಯಾಗಿರುವ ಪಕ್ಷದಿಂದಲೇ ಮೀಟೂ ಆರೋಪಿಗೆ ಸಿಎಂ ಸ್ಥಾನ ನೀಡಿದ್ದು ದ್ರೋಹ

ಪಂಜಾಬ್‌ ಸಿಎಂ ಸ್ಥಾನದಿಂದ ಚನ್ನಿ ಕೆಳಗಿಸಲು ಮಹಿಳಾ ಆಯೋಗದ ಅಧ್ಯಕ್ಷೆ ಆಗ್ರಹ

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ನವದೆಹಲಿ:  ಪಂಜಾಬ್‌ನ ಹೊಸ ಮುಖ್ಯಮಂತ್ರಿ, ಕಾಂಗ್ರೆಸ್‌ ನಾಯಕ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಕಿಡಿ ಕಾರಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಚನ್ನಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಸುದ್ದಿ ಸಂಸ್ಥೆ ಎಎನ್‌ಐ ಜೊತೆಗೆ ಮಾತನಾಡಿರುವ ರೇಖಾ ಶರ್ಮಾ, ‘2018 ರಲ್ಲಿ ಮೀಟೂ ಚಳವಳಿಯ ಸಮಯದಲ್ಲಿ ಚರಣಜಿತ್ ಸಿಂಗ್ ಚನ್ನಿ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಯಿತು. ಪಂಜಾಬ್‌ ರಾಜ್ಯ ಮಹಿಳಾ ಆಯೋಗವು ಈ ವಿಷಯದ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತು. ಚನ್ನಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ರಾಜ್ಯ ಮಹಿಳಾ ಆಯೋಗದ ಆಧ್ಯಕ್ಷರು ಸ್ವತಃ ಧರಣಿ ಕುಳಿತರು. ಆದರೆ ಏನೂ ಆಗಲಿಲ್ಲ,‘ ಎಂದು ರೇಖಾ ಶರ್ಮಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

‘ಮಹಿಳೆಯೊಬ್ಬರ ನೇತೃತ್ವ ಇರುವ ಪಕ್ಷದಿಂದ ಚನ್ನಿ ಅವರನ್ನು ಪಂಜಾಬ್ ಸಿಎಂ ಮಾಡಲಾಗಿದೆ. ಇದು ದ್ರೋಹ. ಚನ್ನಿ ಅವರು  ಮಹಿಳೆಯರ ಸುರಕ್ಷತೆಗೆ ಅಪಾಯಕಾರಿ ಆವರ ವಿರುದ್ಧ ತನಿಖೆ ನಡೆಸಬೇಕು. ಅವರು ಸಿಎಂ ಆಗಲು ಅರ್ಹರಲ್ಲ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕುವಂತೆ ನಾನು ಸೋನಿಯಾ ಗಾಂಧಿ ಅವರನ್ನು  ಒತ್ತಾಯಿಸುತ್ತೇನೆ,’ ಎಂದು ರೇಖಾ ಶರ್ಮಾ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು