ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರಿಂದ ಗದ್ದಲ: ಮೂವರ ವಿರುದ್ಧ ಕ್ರಮ

Last Updated 28 ಮಾರ್ಚ್ 2022, 8:26 IST
ಅಕ್ಷರ ಗಾತ್ರ

ನವದೆಹಲಿ: ಬೆಂಚ್‌ಗಳ ಮೇಲೆ ನಿಂತು ಘೋಷಣೆ ಕೂಗಿದ ಮೂವರು ಬಿಜೆಪಿ ಶಾಸಕರನ್ನು ಹೊರಹಾಕಿದ ಘಟನೆ ದೆಹಲಿ ವಿಧಾನಸಭೆಯಲ್ಲಿ ಸೋಮವಾರ ನಡೆಯಿತು.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ಶಾಸಕರು ಘೋಷಣೆ ಕೂಗಿದ ನಂತರ ವಿಧಾನಸಭೆಯಲ್ಲಿ ಗೊಂದಲದ ವಾತಾವರಣ ಉಂಟಾಯಿತು. ಆ ವೇಳೆ ಮಧ್ಯ ಪ್ರವೇಶಿಸಿದ ಸ್ಪೀಕರ್‌ ರಾಮ್ ಪ್ರಸಾದ್‌ ಗೋಯಲ್‌ ಅವರು, ಬಿಜೆಪಿ ಶಾಸಕರಿಗೆ ಕುಳಿತುಕೊಳ್ಳಲು ಸೂಚಿಸಿದರು. ಸ್ಪೀಕರ್‌ ಮನವಿಗೆ ಸೊಪ್ಪು ಹಾಕದ ಬಿಜೆಪಿ ಶಾಸಕರು ಬೆಂಚ್‌ಗಳ ಮೇಲೆ ನಿಂತು ಕೇಜ್ರಿವಾಲ್‌ ವಿರುದ್ಧ ಘೋಷಣೆ ಕೂಗಲು ಮುಂದಾದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸ್ಪೀಕರ್‌, ಒಂದು ದಿನದ ಮಟ್ಟಿಗೆ ಮೂವರು ಶಾಸಕರನ್ನು ಅಮಾನತುಗೊಳಿಸಿ ಹೊರನಡೆಯುವಂತೆ ಸೂಚಿಸಿದರು.

ಸಿಎಂ ಕೇಜ್ರಿವಾಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಮುಖಂಡರು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ಆಪ್ ಶಾಸಕರು ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT